ಸಾರಾಂಶ
ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಹಾಗೂ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಿಂದ ವಿಧಾನಸೌಧ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲು ತಾಲೂಕಿನಿಂದ 250ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತೆರಳಿದರು. ಕನಕಪುರದಲ್ಲಿ 5 ಬಸ್ಸುಗಳಿಗೆ ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಪಿ.ಕುಮಾರ್ ಚಾಲನೆ ನೀಡಿ ಮಾತನಾಡಿದರು.
-ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆ
-ಕನಕಪುರದಿಂದ 250ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಕನ್ನಡಪ್ರಭ ವಾರ್ತೆ ಕನಕಪುರಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಹಾಗೂ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಿಂದ ವಿಧಾನಸೌಧ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲು ತಾಲೂಕಿನಿಂದ 250ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತೆರಳಿದರು.
ತುಂಗಣಿ ಗೇಟ್‌ನಿಂದ ಗುರುವಾರ ಬೆಳಿಗ್ಗೆ 5 ಬಸ್ಸುಗಳಿಗೆ ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಪಿ.ಕುಮಾರ್ ಚಾಲನೆ ನೀಡಿ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಪಕ್ಷದ ಕಾರ್ಯಕರ್ತರು, ಮುಖಂಡರು ವಿಧಾನಸೌಧ ಚಲೋ ಹೋರಾಟಕ್ಕೆ ತೆರಳುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ದೀನ, ದಲಿತ, ರೈತರ ಪರ ಆಡಳಿತ ನೀಡುತ್ತೇವೆ ಎಂದು ಭರವಸೆ ನೀಡಿ ಅಧಿಕಾರ ಹಿಡಿಯಿತು. ರೈತರ ಹಾಲಿಗೆ ಪ್ರೋತ್ಸಾಹ ಧನ ನೀಡಿಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಇತ್ತೀಚೆಗೆ ಬೆಲೆ ಏರಿಕೆಯಿಂದ ಶ್ರೀಸಾಮಾನ್ಯರಿಗೆ ಹೊರೆಯಾಗಿದೆ. ರೈತರು ಮತ್ತು ಜನರಿಗೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ಎಸ್.ಜಗನ್ನಾಥ್ ಮಾತನಾಡಿ, ರಾಜ್ಯ ಸರ್ಕಾರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ರಾಜ್ಯದ ಖಜಾನೆ ಖಾಲಿಯಾಗಿರುವ ಹಿನ್ನೆಲೆ ಅದನ್ನು ತುಂಬಿಸಿಕೊಳ್ಳಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ, ದಲಿತರ ಮತ್ತು ಎಸ್‌ಸಿ, ಎಸ್‌ಟಿ ನಿಗಮದ ಕೋಟ್ಯಂತರ ರುಪಾಯಿ ಹಣವನ್ನು ಗ್ಯಾರಂಟಿಗೆ ಬಳಸಿ ವಾಲ್ಮೀಕಿ ನಿಗಮದ ಹಣವನ್ನು ಸಚಿವರು, ಶಾಸಕರು ದೋಚಿದ್ದಾರೆ. ಇವರ ದುರಾಡಳಿತಕ್ಕೆ ಜನರು ರೋಸಿ ಹೋಗಿರುವುದರಿಂದ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡುವಂತೆ ಆಗ್ರಹಿಸಿದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್, ಉಪಾಧ್ಯಕ್ಷ ಶಿವಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್, ರೈತ ಮೋರ್ಚ ಸೀರೆಗೌಡ, ಆನಮಾನಹಳ್ಳಿ ಪಾಲಾಕ್ಷ, ಯುವ ಮೋರ್ಚ ತಾಲೂಕು ಅಧ್ಯಕ್ಷ ತಿಮ್ಮಪ್ಪ ಸೇರಿ ಅನೇಕ ಮುಖಂಡರು ಭಾಗವಹಿಸಿದ್ದರು.