ಆಲೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

| Published : Nov 11 2024, 11:51 PM IST

ಸಾರಾಂಶ

ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಮಹಾ ಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಬೂತ್‌ ಅಧ್ಯಕ್ಷರು ಹಾಗೂ ತಂಡದವರ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು, ಇನ್ನೂ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಶ್ರಮ ಹಾಕುವ ಮೂಲಕ ಸದಸ್ಯತ್ವ ಹೆಚ್ಚು ಮಾಡಬೇಕಾಗಿದೆ. ಆದ್ದರಿಂದ ತಮ್ಮ ತಂಡದೊಂದಿಗೆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಸದಸ್ಯರ ನೋಂದಣಿ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಕನ್ನಡಪ್ರಭ ವಾರ್ತೆ ಆಲೂರು

ಬಿಜೆಪಿ ಪಕ್ಷವನ್ನು ಬಲಪಡಿಸಲು ಎಲ್ಲರೂ ನಿರಂತರ ಶ್ರಮಿಸಬೇಕು. ಈ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಅವರು ಆಲೂರು ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಡಿಯಲ್ಲಿ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿದ ಕಾರ್ಯಕರ್ತರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಭಾರತೀಯ ಜನತಾ ಪಕ್ಷ ದೇಶದ ಬಹುದೊಡ್ಡ ರಾಷ್ಟ್ರೀಯ ಪಕ್ಷವಾಗಿದೆ. ಪ್ರಜಾಪ್ರಭುತ್ವದ ಮಾದರಿಯಲ್ಲಿ ಕೆಲಸ ಮಾಡುವ ಅಪರೂಪದ ಪಕ್ಷ ಇದಾಗಿದ್ದು, ದೇಶದಲ್ಲಿ ಸದಸ್ಯತ್ವ ಅಭಿಯಾನ ಸಮಾರೋಪಾದಿಯಲ್ಲಿ ನಡೆಯುತ್ತಿದೆ. ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಮಹಾ ಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಬೂತ್‌ ಅಧ್ಯಕ್ಷರು ಹಾಗೂ ತಂಡದವರ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು, ಇನ್ನೂ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಶ್ರಮ ಹಾಕುವ ಮೂಲಕ ಸದಸ್ಯತ್ವ ಹೆಚ್ಚು ಮಾಡಬೇಕಾಗಿದೆ. ಆದ್ದರಿಂದ ತಮ್ಮ ತಂಡದೊಂದಿಗೆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಸದಸ್ಯರ ನೋಂದಣಿ ಮಾಡಬೇಕು ಎಂದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ಪಕ್ಷದ ಸದಸ್ಯತ್ವ ಪಡೆದವರಿಗೆ ಪಕ್ಷವೂ ಸೂಕ್ತ ಸ್ಥಾನಮಾನ ಮತ್ತು ಪ್ರಾತಿನಿಧ್ಯ ಕಲ್ಪಿಸುತ್ತದೆ. ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕಾರ್ಯಕರ್ತರಿಗೆ ಪಕ್ಷವು ಪರಿಗಣನೆಗೆ ತೆಗೆದುಕೊಳ್ಳುವುದರಿಂದ ಕಾರ್ಯಕರ್ತರು ಹೆಚ್ಚು ಸದಸ್ಯರನ್ನು ಸೇರ್ಪಡೆ ಮಾಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿದ ಆಲೂರು ತಾಲೂಕಿನ ಬಿಜೆಪಿ ಕಾರ್ಯಕರ್ತ ದೊರೇಗೌಡ ಅವರನ್ನು ಪಕ್ಷದ ವತಿಯಿಂದ ಶಾಸಕ ಸಿಮೆಂಟ್ ಮಂಜು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ ನಾಗೇಂದ್ರ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಬಿಜೆಪಿ ಹಿರಿಯ ಮುಖಂಡ ಲೋಕೇಶ್ ಕಣಗಾಲ್, ಅಜಿತ್ ಚಿಕ್ಕಣಗಾಲ್, ಬಾಲಲೋಚನಾ, ಬಸವರಾಜ್, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.