ನಾಳೆಯಿಂದ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವಕ್ಕೆ ಚಾಲನೆ

| Published : Sep 03 2024, 01:37 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಸೆ.೨ರಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ.೪ರಿಂದ ರಾಜ್ಯದಲ್ಲಿ ಸದಸ್ಯತ್ವಕ್ಕೆ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಹಿರೇಕೆರೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಸೆ.೨ರಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ.೪ರಿಂದ ರಾಜ್ಯದಲ್ಲಿ ಸದಸ್ಯತ್ವಕ್ಕೆ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ತಾಲ್ಲೂಕಿನ ಬಾಳಂಬೀಡ ಗ್ರಾಮದ ಬಿ.ಸಿ.ಪಾಟೀಲ ನಿವಾಸದ ಸಭಾಂಗಣದಲ್ಲಿ ನಡೆದ ಒಂದು ದಿನ ಸದಸ್ಯತ್ವ ಅಭಿಯಾನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಕ್ಷದ ಪ್ರಮುಖರು, ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಕಾರ್ಯಕರ್ತರು, ಹಿತೈಶಿಗಳು ೮೮೦೦೦೦೨೦೨೪ ಕ್ಕೆ ಮಿಸ್ಡ್ ಕಾಲ್ ನೀಡಿ ಬಿಜೆಪಿ ಸದಸ್ಯತ್ವ ಪಡೆಯಲು ತಿಳಿ ಹೇಳಬೇಕು.ಸೆ.೪ರಿಂದ ೨೬ರ ವರೆಗೆ, ಅ.೧ರಿಂದ೧೫ರ ವರೆಗೆ ಎರಡು ಹಂತಗಳಲ್ಲಿ ಅಭಿಯಾನ ನಡೆಯಲಿದೆ. ಮಿಸ್ಡ್ ಕಾಲ್, ಕ್ಯೂಆರ್ ಕೋಡ್ ಸ್ಕಾನ್ ಮೂಲಕ, ನಮೋ ಆ್ಯಪ್ ಮೂಲಕ ನೋಂದಾವಣಿ ಮಾಡಬಹುದು. ಅ.೧೫ರಿಂದ ೩೦ರ ವರೆಗೆ ಮನೆ-ಮನೆ ಭೇಟಿ ಮೂಲಕ ಸದಸ್ಯತ್ವ ಅಭಿಯಾನ ನಡೆಯಲಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ೧,೫೦,೦೦೦ ಸಾವಿರ ಸದಸ್ಯತ್ವ ನೋಂದಾಯಿಸಬೇಕು, ಸದಸ್ಯತ್ವ ಅಭಿಯಾನದ ವೇಳೆ ರಾಜ್ಯ ಸರ್ಕಾರದ ದುರಾಡಳಿತ ಬಗ್ಗೆ ಸಾರ್ವಜನಿಕರಲ್ಲಿ ತಿಳಿ ಹೇಳಬೇಕು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕೆಂದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಳದ ಅಧ್ಯಕ್ಷ ಶಿವಕುಮಾರ್ ತಿಪ್ಪಶೆಟ್ಟಿ,ಕೆಸಿಸಿ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಳ್ಳಿ, ಗವಿಸಿದ್ದಪ್ಪ ದ್ಯಾಮಣ್ಣವರ, ನಂಜುಂಡೇಶ್ವರ ಕಳ್ಳೇರ, ಎಸ್ ಎಸ್ ಪಾಟೀಲ್, ದೂಡ್ಡಗೌಡ ಪಾಟೀಲ, ಆನಂದಪ್ಪ ಹಾದಿಮನಿ, ಹನುಮಂತಪ್ಪ ಗಾಜೇರ್, ಎನ್.ಎಂ. ಈಟೇರ, ಪರಮೇಶಪ್ಪ ಹಲಗೇರಿ, ದುರಗೇಶ ತಿರಕ್ಕಪ್ಪನವರ, ದೇವರಾಜ ನಾಗಣ್ಣನವರ್, ಜಗದೇಶ ದೂಡ್ಡಗೌಡರ ಇದ್ದರು.