ಸಾರಾಂಶ
ಬೀಳಗಿ ಮತಕ್ಷೇತ್ರದಲ್ಲಿ ಬಿಜೆಬಿ ಸದಸ್ಯತ್ವ ಅಭಿಯಾನ ಅಭೂತಪೂರ್ವ ಯಶಸ್ವಿಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ನನ್ನ ಗೆಲವು ಕೂಡಾ ಯಶಸ್ವಿ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಕನ್ನಡಪ್ರಭ ವಾರ್ತೆ ಕೆರೂರ
ಬೀಳಗಿ ಮತಕ್ಷೇತ್ರದಲ್ಲಿ ಬಿಜೆಬಿ ಸದಸ್ಯತ್ವ ಅಭಿಯಾನ ಅಭೂತಪೂರ್ವ ಯಶಸ್ವಿಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ನನ್ನ ಗೆಲವು ಕೂಡಾ ಯಶಸ್ವಿ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.ಕೆರಕಲಮಟ್ಟಿ ಸಮೀಪದ ಕೇದಾರನಾಥ ಶುಗರ್ ಫ್ಯಾಕ್ಟರಿಯಲ್ಲಿ ಬೀಳಗಿ ಮತಕ್ಷೇತ್ರದ ಬಾದಾಮಿ ತಾಲೂಕಿನ 42 ಗ್ರಾಮಗಳ ಬಿಜೆಪಿ ಸದಸ್ಯತ್ವ ಅಭಿಯಾನ ಸಭೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ-ವಿಜಯಪುರ ಅವಳಿ ಜಿಲ್ಲೆಗಳಲ್ಲಿ ಬೀಳಗಿ ಮತಕ್ಷೇತ್ರ 60 ಸಾವಿರ ಸದಸ್ಯರ ನೋಂದಣಿ ಹೊಂದಿದ್ದು, ಜನರು ಸ್ದಯಂ ಪ್ರೇರಣೆಯಿಂದ ಸದಸ್ಯತ್ವ ಪಡೆದಿದ್ದಾರೆ. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತ ಹಾಗೂ ನನ್ನ ಅಧಿಕಾರದ ಸೇವೆ ನೆನಪಿಸಿಕೊಂಡಿದ್ದಕ್ಕೆ ಸಾಕ್ಷಿಯಾಗಿದೆ ಎಂದರು.ಸದಸ್ಯತ್ವ ಅಭಿಯಾನದಿಂದ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆಯಾಗಿದ್ದು, ಇನ್ನೂ ಸಾಕಷ್ಟು ಜನ ಬಿಜೆಪಿಗೆ ಹರಿದು ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಜಿಪಂ ಮಾಜಿ ಉಪಾಧ್ಯಕ್ಷ ಹೂವಪ್ಪ ರಾಠೋಡ ಮಾತನಾಡಿ, ಬೀಳಗಿ ಮತಕ್ಷೇತ್ರದಲ್ಲಿ ಜನರು ಸ್ವಯಂ ಪ್ರೇರಣೆಯಿಂದ ಬಿಜೆಪಿ ಸದಸ್ಯತ್ವ ಪಡೆದಿರುವುದು ಮುರುಗೇಶ ನಿರಾಣಿಯವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ನನಗೇನೂ ಆಸಕ್ತಿ ಇಲ್ಲ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಹಿರಿಯರಿಗೆ ಬಿಟ್ಟುಕೊಟ್ಟಿದ್ದು ನೋಡೋಣ.-ಮುರುಗೇಶ ನಿರಾಣಿ,
ಮಾಜಿ ಸಚಿವರು.