ಸಾರಾಂಶ
ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಬಿಜೆಪಿ ಪಕ್ಷದ ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಯುವಕರು, ಹಿರಿಯರು, ಕಾರ್ಮಿಕರು ಸೇರಿದಂತೆ ಇತರರಿಗೆ ಸದಸ್ಯತ್ವ
ಕನ್ನಡಪ್ರಭ ವಾರ್ತೆ ಮಲ್ಕುಂಡಿ
ಭವ್ಯ ಭಾರತದ ಭವಿಷ್ಯಕ್ಕಾಗಿ ಬಿಜೆಪಿ ಸದಸ್ಯತ್ವ ನೋಂದಣಿ ಮಾಡಲಾಗುತ್ತಿದ್ದು, ಇದು ಬಹು ಮುಖ್ಯವಾಗಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.ನಂಜನಗೂಡು ತಾಲೂಕಿನ ಹುರ ಶಕ್ತಿ ಕೇಂದ್ರ ವ್ಯಾಪ್ತಿಯ ಮಲ್ಕುಂಡಿ, ಕಾರ್ಯ, ಮಾದಪುರ ಗ್ರಾಮಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಬಿಜೆಪಿ ಪಕ್ಷದ ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಯುವಕರು, ಹಿರಿಯರು, ಕಾರ್ಮಿಕರು ಸೇರಿದಂತೆ ಇತರರಿಗೆ ಸದಸ್ಯತ್ವ ನೀಡಲಾಗುತ್ತಿದ್ದು, ದೇಶದಲ್ಲಿ ಬಿಜೆಪಿ ಜನಪರ ಯೋಜನೆಯನ್ನು ಜಾರಿಗೆ ತಂದು, ದೇಶದಲ್ಲಿ ನರೇಂದ್ರ ಮೋದಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ, ಕರ್ನಾಟಕದಲ್ಲಿ ಬಿ.ವೈ. ವಿಜಯೇಂದ್ರ ಅವರು ಯುವಕರ ಹಿತಕ್ಕಾಗಿ ಹಗಲು ಈರುಳು ಶ್ರಮಿಸುತ್ತಿದ್ದಾರೆ ಎಂದರು.ದೇಶದಲ್ಲಿ ಬಹಳ ಯುವಕರು ಬಿಜೆಪಿಯ ಸದಸ್ಯತ್ವ ಹೊಂದುತ್ತಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕಾಂಗ್ರೆಸ್ ನಿಂದ ಅಭಿವೃದ್ಧಿ ಶೂನ್ಯವಾಗಿದೆ, ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನು ಏನು ತಪ್ಪು ಮಾಡಿಲ್ಲ ಎಂದು ಹೇಳಿ ರಾಜ್ಯದ ಜನರ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ. ಈಗಾಗಲೇ ಹೈಕೋರ್ಟ್ ಆದೇಶದ ಮೇರೆಗೆ ತನಿಖೆಯಾಗಲಿದ್ದು, ಮುಖ್ಯಮಂತ್ರಿಯವರು ನೆರ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ತಾಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಮಹದೇವಸ್ವಾಮಿ ಇದ್ದರು.