ಧರ್ಮದ ಹೆಸರಲ್ಲಿ ಯುವಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ: ವಿನಯ

| Published : Feb 01 2024, 02:01 AM IST

ಧರ್ಮದ ಹೆಸರಲ್ಲಿ ಯುವಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ: ವಿನಯ
Share this Article
  • FB
  • TW
  • Linkdin
  • Email

ಸಾರಾಂಶ

ಯುವ ಪೀಳಿಗೆ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ನಾಯಕರು ದೇವರ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ.

ಮೊಳಕಾಲ್ಮುರು: ಯುವ ಪೀಳಿಗೆ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ನಾಯಕರು ದೇವರ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ಸೂಕ್ತ ಉತ್ತರ ನೀಡಲಿದ್ದಾರೆಂದು ಯುತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ ಹೇಳಿದರು.

ತಾಲೂಕಿನ ಬಿಜಿಕೆರೆ ಗ್ರಾಮದ ಪೆನ್ನೋಬಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮುಖಂಡರೊಂದಿಗೆ ಮಾತನಾಡಿದರು.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಬರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಸರ್ಕಾರ ನುಡಿದಂತೆ ನಡೆದುಕೊಂಡಿದೆ.ಸರ್ಕಾರದ ಸೌಲಭ್ಯವನ್ನು ಜನರು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆಯಾಗುತ್ತಿದೆ.

ಆದರೆ ಬಿಜೆಪಿ ನಾಯಕರು ದೇವರು ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಾ ಚುನಾವಣೆ ಗೆಲ್ಲುವ ತಂತ್ರ ಮಾಡುತ್ತಿದ್ದಾರೆ. ಅಂಬೇಡ್ಕರರ ಆಶಯದಂತೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಸರ್ಕಾರ ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಅಭಿವೃದ್ದಿಗೆ ನಾನಾ ಯೋಜನೆಗಳನ್ನು ಜಾರಿ ಮಾಡಿದೆ. ಸಿಗುವಂತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಎಲ್ಲರೂ ವಿದ್ಯಾವಂತರಾಗಬೇಕೆಂದರು. ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ನಾನೂ ಸಹ ಆಕಾಂಕ್ಷಿಯಾಗಿದ್ದೇನೆ. ಪಕ್ಷ ಅವಕಾಶ ಕಲ್ಪಿಸಿದರೆ ನಿಮ್ಮಗಳ ಸಹಕಾರ ಅಗತ್ಯವಾಗಿದೆ. ಅವಕಾಶ ಸಿಕ್ಕಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡ ಪಾಲವ್ವನಹಳ್ಳಿ ಕರಿಯಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಅಜ್ಜಯ್ಯ, ಯುತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಡಾ.ದಾದಪೀರ್, ಕಾರ್ಯದರ್ಶಿ ಮಹಬೂಬ್ ಬಾಷ,ದಸಂಸ ವಿಭಾಗೀಯ ಸಂಚಾಲಕ ಬಿ.ಟಿ.ನಾಗಭೂಷಣ, ಜಿಲ್ಲಾ ಸಂಘಟನಾ ಸಂಚಾಲಕ ಬಿ.ಬಸವರಾಜ, ಬಿ.ಸಿದ್ದಣ್ಣ,ಮಂಜಣ್ಣ, ಚಂದ್ರಣ್ಣ, ನಾಗಯ್ಯ, ದುರುಗಣ್ಣ, ತಿಪ್ಪಯ್ಯ, ದುರುಗಣ್ಣ, ಮಾರಣ್ಣ, ಎಲ್.ನಗರಾಜ, ಎಂ.ನಾಗಭೂಷಣ ಇದ್ದರು.