ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಬಿಜೆಪಿ ಕೋಲಾರದಲ್ಲಿ ಸಂತಾಪ

| Published : Dec 12 2024, 12:33 AM IST

ಸಾರಾಂಶ

ರಾಜ್ಯದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ಎಸ್.ಎಂ.ಕೃಷ್ಣರ ನಿಧನಕ್ಕೆ ಕೋಲಾರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಕೋಲಾರ: ರಾಜ್ಯದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ಎಸ್.ಎಂ.ಕೃಷ್ಣರ ನಿಧನಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ, ಎಸ್.ಎಂ.ಕೃಷ್ಣರ ಸಾವಿನಿಂದ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ, ಮುಖ್ಯಮಂತ್ರಿಯಾಗಿ ಐಟಿ- ಬಿಟಿ ಕ್ಷೇತ್ರದ ಬೆಳವಣಿಗೆಗೆ ನೀಡಿರುವ ಕೊಡುಗೆಗಾಗಿ ಕರ್ನಾಟಕ ಜನರು ಅವರನ್ನು ಸದಾಕಾಲ ನೆನೆಯುತ್ತಾರೆ. ಕೃಷ್ಣರವರ ರಾಜಕೀಯ ಉದ್ದಕ್ಕೂ ಹಿರಿಯರಿಗೆ, ಕಿರಿಯರಿಗೆ ಮಾರ್ಗದರ್ಶನ ನೀಡಿದ್ದಾರೆ. ಅವರ ಶಿಸ್ತು ಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನ ಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿ, ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ನೋವು ಮರೆಸುವ ಶಕ್ತಿ ಕೊಟ್ಟು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರಿದರು. ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ವಾಸುದೇವ್, ಮುಖಂಡರಾದ ಕೋಳಿ ನಾಗರಾಜ್, ಎಸ್.ಬಿ.ಮುನಿ ವೆಂಕಟಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಹಾರೋಹಳ್ಳಿ ವೆಂಕಟೇಶ್, ತಿಮ್ಮರಾಯಪ್ಪ, ಓಹಿಲೇಶ್, ಜನಾರ್ದನ, ಅರುಣ್, ಮಂಜುನಾಥ್ ಸಿಂಗ್, ವೆಂಕಟ್ ಇದ್ದರು.