ಮುಡಾ: ಇಡಿ ಜೊತೆ ಸಿಬಿಐ ತನಿಖೆಯೂ ಆಗಲಿ

| Published : Oct 20 2024, 01:48 AM IST

ಸಾರಾಂಶ

ಇಬ್ಬರನ್ನು ವಿಚಾರಣೆ ಮಾಡಿದರೆ ಬಹಳಷ್ಟು ಮಾಹಿತಿ ಸಿಗುತ್ತದೆ

ಕನ್ನಡಪ್ರಭ ವಾರ್ತೆ ಮೈಸೂರುಮುಡಾ ಹಗರಣ ಕುರಿತು ತಪ್ಪು ಮಾಡಿರುವ ಕಾರಣ ಇಡಿ, ಸಿಬಿಐ ತನಿಖೆ ಬೇಡವೆಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ತನಿಖೆ ಮಾಡಲ್ಲ. ಆದ ಕಾರಣ ಈಗ ಇಡಿ ತನಿಖೆ ಜೊತೆಗೆ ಸಿಬಿಐ ಆಗಲಿ ಎಂದು ಬಿಜೆಪಿ ನಗರಾಧ್ಯಕ್ಷರಾದ ಮಾಜಿ ಶಾಸಕ ಎಲ್. ನಾಗೇಂದ್ರ ಆಗ್ರಹಿಸಿದರು.ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ 50:50 ಅನುಪಾತದ ಬಗ್ಗೆ ನಗರಾಭಿವೃದ್ಧಿ ಕಾರ್ಯದರ್ಶಿ ಪತ್ರ ಬರೆದರೂ ಕೇರ್ ಮಾಡದೆ ನಿವೇಶನ ಹಂಚಿಕೆ ಮಾಡಿದ್ದಾರೆ. ಆದರೆ, ಇದಕ್ಕೆ ಕಾರಣರಾದ ಇಬ್ಬರು ಆಯುಕ್ತರನ್ನು ಸೇಫ್ ಮಾಡಲಾಗುತ್ತಿದೆ. ಇಬ್ಬರನ್ನು ವಿಚಾರಣೆ ಮಾಡಿದರೆ ಬಹಳಷ್ಟು ಮಾಹಿತಿ ಸಿಗುತ್ತದೆ. ಇಡಿ ತನಿಖೆ ಮಾಡಿದರೆ ಇವರಿಗೆ ಏನು ತೊಂದರೆ ಎಂದು ಪ್ರಶ್ನಿಸಿದರು.3 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಮಾತನಾಡಿ, ರಾಜ್ಯದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳೇ ಕಣಕ್ಕೆ ಇಳಿಯುತ್ತಾರೆ. ಮೂರು ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ. ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಯ್ಕೆ ಕುರಿತು ಎರಡು ಪಕ್ಷದ ನಾಯಕರು ಕುಳಿತು ಚರ್ಚೆ ಮಾಡುತ್ತಾರೆ. ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್ ಫೈನಲ್ ಮಾಡುತ್ತದೆ. ಎರಡು ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತವೆ. ಯಾವುದೇ ಭಿನ್ನಾಭಿಪ್ರಾಯಗಳು ನಮ್ಮಲ್ಲಿ ಇಲ್ಲ ಎಂದರು.ವಾಲ್ಮೀಕಿ ನಿಗಮದ ಹಣವನ್ನು ಲೋಕಸಭಾ ಚುನಾವಣೆ ವೇಳೆ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟಿದ್ದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ. ಹೀಗಾಗಿ, ಕಾಂಗ್ರೆಸ್ ಸಂಸದರಾದ ತುಕಾರಾಂ ಹಾಗೂ ಕುಮಾರ್ ನಾಯಕ್ ಅವರನ್ನು ಅನರ್ಹಗೊಳಿಸಬೇಕು. ಈ ಬಗ್ಗೆ ಅ.22 ರಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ವತಿಯಿಂದ ಲಿಖಿತ ದೂರು ನೀಡುತ್ತೇವೆ ಎಂದು ಅವರು ಹೇಳಿದರು.ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ಹೇಮಂತ್ ಕುಮಾರ್ ಗೌಡ, ಕೇಬಲ್ ಮಹೇಶ್, ಜೋಗಿ ಮಂಜು, ಮಹೇಶ್ ರಾಜೇ ಅರಸ್ ಮೊದಲಾದವರು ಇದ್ದರು.