ಕೊಪ್ಪಳದಲ್ಲಿ ಪಾಕಿಸ್ತಾನ ಪರ ಘೋಷಣೆ ವಿರುದ್ಧ ಬಿಜೆಪಿ ಆಕ್ರೋಶ

| Published : Feb 29 2024, 02:06 AM IST

ಕೊಪ್ಪಳದಲ್ಲಿ ಪಾಕಿಸ್ತಾನ ಪರ ಘೋಷಣೆ ವಿರುದ್ಧ ಬಿಜೆಪಿ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಸಭಾ ಚುನಾವಣೆ ನಡೆದು, ಫಲಿತಾಂಶ ಘೋಷಣೆಯಾಗುವ ವೇಳೆಯಲ್ಲಿ ವಿಜಯೋತ್ಸವ ಆಚರಣೆ ಮಾಡಬೇಕು. ಪಕ್ಷದ ಪರವಾಗಿ ಘೋಷಣೆ ಕೂಗಬೇಕು.

ಕೊಪ್ಪಳ: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್ ಮಾತನಾಡಿ, ಕಾಂಗ್ರೆಸ್‌ ಸಂಸದ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಸಹಿಸಿಕೊಳ್ಳಲು ಆಗದು. ಇದಕ್ಕೆ ಬೆಂಬಲಿಸುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮವಾಗಬೇಕು ಎಂದು ಆಗ್ರಹಿಸಿದರು.ರಾಜ್ಯಸಭಾ ಚುನಾವಣೆ ನಡೆದು, ಫಲಿತಾಂಶ ಘೋಷಣೆಯಾಗುವ ವೇಳೆಯಲ್ಲಿ ವಿಜಯೋತ್ಸವ ಆಚರಣೆ ಮಾಡಬೇಕು. ಪಕ್ಷದ ಪರವಾಗಿ ಘೋಷಣೆ ಕೂಗಬೇಕು. ಅದು ಬಿಟ್ಟು ಸಂಸದ ನಾಸೀರ್ ಅವರ ಬೆಂಬಲಿದರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಕುರಿತು ಪ್ರಶ್ನೆ ಮಾಡಿದ ಮಾಧ್ಯಮದವರ ಮೇಲೆ ಹರಿಹಾಯ್ದಿದ್ದಾರೆ. ಹೀಗಾಗಿ, ಘೋಷಣೆ ಕೂಗಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೆಂಬಲಿಸಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ದೇಶದ್ರೋಹಿಗಳನ್ನು ಹಿಡಿದು ಹೆಡೆಮುರಿ ಕಟ್ಟಬೇಕಾದ ಸರ್ಕಾರ ತನಿಖೆಯ ನೆಪದಲ್ಲಿ ರಕ್ಷಣೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.ಇಂಥ ಘಟನೆ ಹಿಂದೆ ಎಂದೂ ವಿಧಾನಸೌಧದಲ್ಲಿ ನಡೆದಿರಲಿಲ್ಲ. ಈ ಘಟನೆ ನಡೆಯಲು ಯಾರು ಕಾರಣ? ಅವರಿಗೆ ಪಾಸ್ ಕೊಟ್ಟವರು ಯಾರು? ಅವರ ಬೆಂಬಲಿಗರು ಆಗಿದ್ದರೆ ಘೋಷಣೆ ಕೂಗಲು ಹೇಗೆ ಸಾಧ್ಯವಾಯಿತು? ಎನ್ನುವುದನ್ನು ತನಿಖೆ ಮಾಡುವಂತೆ ಆಗ್ರಹಿಸಿದ್ದಾರೆ.ದೇಶದ್ರೋಹ ಎಸಗುವ ಇಂಥವರು ಯಾವುದೇ ಪಕ್ಷವಾಗಿದ್ದರೂ ಬಿಡಬಾರದು. ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಘೋಷಣೆ ಕೂಗಲಾಯಿತು.ಪ್ರತಿಭಟನೆಯಲ್ಲಿ ನಗರ ಮಂಡಲ ಅಧ್ಯಕ್ಷ ರಮೇಶ ಕವಲೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮೌನೇಶ ದಢೇಸ್ಗೂರು, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೀರ್ತಿ ಪಾಟೀಲ್, ಮುಖಂಡರಾದ ಮಹಾಂತೇಶ ಪಾಟೀಲ್, ಫಕೀರಪ್ಪ ಆರೇರೆ, ಬಸವರಾಜ ಇಂದರಗಿ, ಶಂಕರ್ ಪೂಜಾರ, ಮಹಾಲಕ್ಷ್ಮೀ ಕಂದಾರಿ, ಗೀತಾ ಪಾಟೀಲ್, ವಕ್ತಾರ ಸೋಮಶೇಖರಗೌಡ, ಸಹ ವಕ್ತಾರ ಅಮಿತ್ ಕಂಪ್ಲಿಕರ್, ಮಹೇಶ ಹಾದಿಮನಿ, ಪ್ರಸಾದ ಗಾಳಿ, ಮಾರುತಿ ಆಪ್ಟೆ, ವಿರೇಶ ಇದ್ದರು.