ಸಾರಾಂಶ
ಕಾಂಗ್ರೆಸ್ ಸರ್ಕಾರದಿಂದ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ನೀತಿ ಖಂಡಿಸಿ ಶುಕ್ರವಾರ ಇಲ್ಲಿನ ದಾಜಿಬಾನಪೇಟೆಯಲ್ಲಿರುವ ಸಹಸ್ರಾರ್ಜುನ ವೃತ್ತದಲ್ಲಿ ಹು-ಧಾ ಪೂರ್ವ ವಿಧಾನಸಭಾ ಮತಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಿಂದ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ನೀತಿ ಖಂಡಿಸಿ ಶುಕ್ರವಾರ ಇಲ್ಲಿನ ದಾಜಿಬಾನಪೇಟೆಯಲ್ಲಿರುವ ಸಹಸ್ರಾರ್ಜುನ ವೃತ್ತದಲ್ಲಿ ಹು-ಧಾ ಪೂರ್ವ ವಿಧಾನಸಭಾ ಮತಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಧಾರವಾಡ ವಿಭಾಗದ ಸಹ ಪ್ರಭಾರಿ ನಾರಾಯಣ ಜರ್ತಾಘರ ಮಾತನಾಡಿ, ಈ ಸರ್ಕಾರದ ಆಡಳಿತದಲ್ಲಿ ಸುಧಾರಣೆ ಕಾಣುವುದು ಸಾಧ್ಯವಿಲ್ಲ. ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024ರ ಜೂನ್ ತಿಂಗಳಿನಲ್ಲಿ ₹2 ಹಾಗೂ ಈಗ ₹4 ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತಿ ಯೂನಿಟ್‌ಗೆ 36 ಪೈಸೆ ಬರೆಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಪ್ರಭು ನವಲಗುಂದಮಠ, ಸಂತೋಷ ಅರಕೇರಿ, ರಂಗಾ ಬದ್ದಿ, ಹು-ಧಾ ಪೂರ್ವ ಪ್ರಧಾನ ಕಾರ್ಯದರ್ಶಿ ಜಗದೀಶ ಬುಳ್ಳಾನವರ, ತೋಟಪ್ಪ ನಿಡಗುಂದಿ, ಚಂದ್ರಶೇಖರ ಗೋಕಾಕ್, ಅರುಣ ಹುದ್ಲಿ, ವಿನಾಯಕ ಲದವಾ, ವೆಂಕಟೇಶ್ ಕಾಟವೆ, ಜಗದೀಶ ಕಂಬಳಿ, ಮಾರುತಿ ಚಾಕಲಾಬ್ಬಿ, ಮಿಥುನ್ ಚವ್ಹಾಣ, ಸುವರ್ಣಾ ಜಂಗಮಗೌಡರ, ಡಾ. ರವೀಂದ್ರ ವೈ, ಪ್ರೀತಮ್ ಅರಕೇರಿ, ಹು-ಧಾ ಪೂರ್ವ ಮಾಧ್ಯಮ ಸಂಚಾಲಕ ಲಕ್ಷ್ಮೀಕಾಂತ ಘೋಡಕೆ, ಪೂರ್ಣಿಮಾ ಶಿಂಧೆ, ಅನುಪ ಬಿಜವಾಡ ಸೇರಿದಂತೆ ಹಲವರಿದ್ದರು.