ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿ ನೇಮಕಗೊಂಡು ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿದ ರಶ್ಮಿ ಸಾಮಂತ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.

ಉಡುಪಿ: ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿ ನೇಮಕಗೊಂಡು ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿದ ರಶ್ಮಿ ಸಾಮಂತ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.ಈ ಸಂದರ್ಭ ಮಾತನಾಡಿದ ಅವರು, ವಿಶ್ವದಲ್ಲಿ ಅತಿಹೆಚ್ಚು ಯುವ ಶಕ್ತಿ ಇರುವ ದೇಶ ಭಾರತ. ದೇಶ ಮೊದಲು ಎಂಬ ಚಿಂತನೆಯಲ್ಲಿ ಯುವಕ ಯುವತಿಯರ ದೇಶ ಕಟ್ಟುವ ಕೆಲಸ ಮಾಡಬೇಕು, ಬಿಜೆಪಿಯಲ್ಲಿ ಯುವಜನತೆಯನ್ನು ಸಕ್ರಿಯವಾಗಿಸಲು ಪ್ರಾಮಾಣಿಕ ಪ್ರಯತ್ನದ ಮೂಲಕ ಪಕ್ಷ ಸಂಘಟನೆಗೆ ಅತ್ಯಮೂಲ್ಯ ಕೊಡುಗೆ ನೀಡೋಣ ಎಂದು ಆಶಿಸಿದರು.ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅಭಿನಂದನಾ ಮಾತುಗಳನ್ನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮಿನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ಕುಂದರ್, ಅಭಿರಾಜ್ ಸುವರ್ಣ, ಪ್ರಮುಖರಾದ ಕಿಶೋರ್ ಕುಮಾರ್ ಕರಂಬಳ್ಳಿ, ಗುರುರಾಜ್ ಭಂಡಾರಿ, ಶ್ರೀವತ್ಸ, ನಿತಿನ್ ಪೈ ಮತ್ತಿತರರಿದ್ದರು.