ಬೆಂಗಳೂರು- ಮೈಸೂರು ಪಾದಯಾತ್ರೆ ಹಿನ್ನೆಲೆಃ ಬಿಜೆಪಿ ಪೂರ್ವಭಾವಿ ಸಭೆ

| Published : Aug 01 2024, 01:48 AM IST

ಬೆಂಗಳೂರು- ಮೈಸೂರು ಪಾದಯಾತ್ರೆ ಹಿನ್ನೆಲೆಃ ಬಿಜೆಪಿ ಪೂರ್ವಭಾವಿ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರು ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ, ಪ.ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಈಗೆ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಒಂದಲ್ಲ ಒಂದು ಹಗರಣ ಮಾಡಿಕೊಂಡು ಬರುತ್ತಿದ್ದು ಜನತೆಗೆ ವಂಚಿಸುವ ನಿಟ್ಟಿನಲ್ಲಿ ಸರ್ಕಾರ ನೆಡೆಸುತ್ತಿರುವುದು ಸತ್ಯ ಸಂಗತಿ.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶೇ.50ಃ 50 ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ವಿರುದ್ಧ ಹಮ್ಮಿಕೊಂಡಿರುವ ಬಿಜೆಪಿ ಪಾದಯಾತ್ರೆಯಲ್ಲಿ ಹೆಚ್ಚಿನ ಮಂದಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮನವಿ ಮಾಡಿದರು.

ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ, ಪ.ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಈಗೆ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಒಂದಲ್ಲ ಒಂದು ಹಗರಣ ಮಾಡಿಕೊಂಡು ಬರುತ್ತಿದ್ದು ಜನತೆಗೆ ವಂಚಿಸುವ ನಿಟ್ಟಿನಲ್ಲಿ ಸರ್ಕಾರ ನೆಡೆಸುತ್ತಿರುವುದು ಸತ್ಯ ಸಂಗತಿ ಎಂದರು.

ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ಕೊಡುವ ಭರವಸೆಯನ್ನು ನೀಡಿ ಅದನ್ನೂ ಕೂಡ ಪೂರೈಸಲಾಗದೆ ಜನತೆಗೆ ಹಾಡು ಹಗಲೇ ಮೋಸ ಮಾಡುತ್ತಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಎಂಡಿಎ ನಲ್ಲಿ 50-50 ಅನುಪಾತವನ್ನು ಕಳೆದ 2023 ರಲ್ಲೇ ರದ್ದುಪಡಿಸಬೇಕು ಎಂಬ ಆದೇಶವಿದ್ದೂ ಕೂಡ ಮುಖ್ಯಮಂತ್ರಿಗಳು ಎಂಡಿಎ ಹಗರಣದಲ್ಲಿ ಭಾಗಿಯಾಗಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ತಮ್ಮ ವ್ಯಾಪ್ತಿಯಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದು ತಿಳಿಯುತ್ತಿದೆ. ಸರ್ಕಾರದ ಈ ಎಲ್ಲಾ ಭ್ರಷ್ಟಾಚಾರ, ಹಗರಣವನ್ನು ವಿರೋಧಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರ ಕರೆಯ ಮೇರೆಗೆ ಬೆಂಗಳೂರಿನಿಂದ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.

ಈ ಪಾದಯಾತ್ರೆಗೆ ಆ. 3 ರಿಂದ ನಮ್ಮ ಜಿಲ್ಲೆಯಿಂದಲೂ ಪ್ರತಿದಿನ ಐದುನೂರು ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ರಾಜ್ಯದಿಂದ ಬಹುತೇಕ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ಸರ್ಕಾರದ ಲೋಪ ಹಾಗೂ ಭ್ರಷ್ಟಾಚಾರಗಳ ವಿರುದ್ದ ರಣಕಹಳೆ ಮೊಳಗಲಿದೆ ಎಂದು ಅವರು ಹೇಳಿದರು.

ಮಾಜಿ ಶಾಸಕ ಬಿ. ಹರ್ಷವರ್ಧನ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳಅಭಿವೃದ್ಧಿ ಗೆ ಮೀಸಲಿಟ್ಟಿದ್ದ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು ಹಿಂದುಳಿದ ವರ್ಗಗಳ ಅಭಿವೃದ್ಧಿ ರಾಜ್ಯದೆಲ್ಲೆಡೆ ಕುಂಟಿತವಾಗಿದ್ದು, ಇದು ಸಾರ್ವಜನಿಕ ವಲಯದಲ್ಲಿ ಮನೆಮಾತಾಗಿದೆ. ಈಗೆಯೇ ಮುಂದುವರೆದರೆ ಹಿಂದುಳಿದ ವರ್ಗಗಳು ಅಭಿವೃದ್ಧಿಯಿಂದ ವಂಚಿತವಾಗುತ್ತಿವೆ ಎಂದು ಹರಿಹಾಯ್ದರು.

ಎಂಡಿಎ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಭಾಗಿಯಾಗಿದ್ದು ಹಾಗೂ ದಾಖಲೆಗಳ ಸಮೇತ ಸಿಕ್ಕಿಹಾಕಿಕೊಂಡಿರುವುದು ಈಗಾಗಲೇ ರಾಜ್ಯದ ಜನತೆಗೆ ತಿಳಿದಿದೆ. ಮುಖ್ಯಮಂತ್ರಿಗಳಿಗೆ ತಮ್ಮ ತಪ್ಪಿನ ಅರಿವಾಗಿ ಇದರಿಂದ ಮುಜುಗರಕ್ಕೆ ಒಳಗಾಗಿರುವುದು ಅವರ ನಡೆನುಡಿಯಲ್ಲಿ ತಿಳಿಯುತ್ತದೆ ಎಂದು ಅವರು ತಿಳಿಸಿದರು.

ಜಿಪಂ ಮಾಜಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಎಸ್. ಮಹದೇವಯ್ಯ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಇದ್ದರು.