ಬಿಜೆಪಿ ಪ್ರಚಾರಪ್ರಿಯ ಕಾಂಗ್ರೆಸ್‌ ಅಭಿವೃದ್ಧಿ ಪರ: ಶಾಸಕ ರಾಘವೇಂದ್ರ ಹಿಟ್ನಾಳ

| Published : Feb 12 2024, 01:30 AM IST / Updated: Feb 12 2024, 03:07 PM IST

ರಾಘವೇಂದ್ರ ಹಿಟ್ನಾಳ
ಬಿಜೆಪಿ ಪ್ರಚಾರಪ್ರಿಯ ಕಾಂಗ್ರೆಸ್‌ ಅಭಿವೃದ್ಧಿ ಪರ: ಶಾಸಕ ರಾಘವೇಂದ್ರ ಹಿಟ್ನಾಳ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ, ಆರೆಸ್ಸೆಸ್‌ ನೀತಿಗೆ ಜನರು ಬೇಸತ್ತಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಕಡೆ ಜನರು ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಜನರು ಬರುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ.

ಕೊಪ್ಪಳ: ಬಿಜೆಪಿ ಪ್ರಚಾರಪ್ರಿಯ ಪಕ್ಷವಾದರೆ, ಕಾಂಗ್ರೆಸ್ ಅಭಿವೃದ್ಧಿ ಪೂರಕ ಪಕ್ಷವಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಅಭಿಪ್ರಾಯಪಟ್ಟರು.

ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಮಾಜಿ ಜಿಪಂ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ ನೇತೃತ್ವದಲ್ಲಿ ಕೋಳೂರು ಹಾಗೂ ಹಿಟ್ನಾಳ ಗ್ರಾಮಗಳ ಮುಖಂಡರು ಮತ್ತು ಯುವಕರು ಕಾಂಗ್ರೆಸ್ ಪಕ್ಷ ಸೇರಿದ ವೇಳೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ಬಿಜೆಪಿ, ಆರೆಸ್ಸೆಸ್‌ ನೀತಿಗೆ ಜನರು ಬೇಸತ್ತಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಕಡೆ ಜನರು ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಜನರು ಬರುತ್ತಿದ್ದಾರೆ. 

ರಾಜ್ಯದಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ. ಜನರ ನಾಡಿಮಿಡಿತ ಅರಿತು ಕಾಂಗ್ರೆಸ್ ಪಕ್ಷ ಕಾರ್ಯ ಮಾಡುತ್ತದೆ. ಆದರೆ ಬಿಜೆಪಿ ಜನ ಸಾಮಾನ್ಯರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. 

ಜನರ ಕಷ್ಟ ಅವರಿಗೆ ಅರಿವಿಲ್ಲ. ಜನರಿಗೆ ಏನು ಬೇಕು, ಏನು ಬೇಡ ಎಂಬ ವಿಷಯಗಳ ಅರಿವು ಅವರಿಗಿಲ್ಲ ಎಂದರು.

ಬಿಜೆಪಿ ಮತ್ತು ಆರೆಸ್ಸೆಸ್‌ನ ಇಬ್ಬಗೆಯ ನೀತಿಗೆ ಜನರು ಬೇಸತ್ತು ಹೋಗಿದ್ದಾರೆ. ಕಾಂಗ್ರೆಸ್ ಪಕ್ಷ ಬಡ ಜನರ ನಿರ್ಗತಿಕರ ಪರವಾಗಿದೆ. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಬಲ ಹಚ್ಚಿದೆ. 

ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಿ ಹಿಡಿಯುವುದು ನಿಶ್ಚಿತವಾಗಿದೆ. ನಾವೆಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದರು.ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೆಯಿಂದ ಜನರು ನೆಮ್ಮದಿ ಬದುಕು ಕಟ್ಟಿಕೊಂಡಿದ್ದಾರೆ. 

ಹಸಿವಿನ ತಾಪತ್ರಯ ತಪ್ಪಿದೆ.ಅನ್ನಭಾಗ್ಯ ರಾಜ್ಯದ ಹಸಿವು ನೀಗಿಸಿದೆ. ಮಹಿಳೆಯರು ಉಚಿತ ಪ್ರಯಾಣ ಮಾಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಮಹಿಳಾ ಶಕ್ತಿಗೆ ಪ್ರಾತಿನಿಧ್ಯ ನೀಡಲಾಗಿದೆ ಎಂದರು.

ಕುಟುಂಬದ ನಿರ್ವಹಣೆಗಾಗಿ ಮಹಿಳೆಯರ ಖಾತೆಗೆ ₹2000 ಭರಿಸಲಾಗುತ್ತಿದೆ. ಯುವಶಕ್ತಿ ಬದುಕು ರೂಪಿಸಿಕೊಳ್ಳಬೆಕು ಎಂದು ಅವರಿಗೆ ಕೆಲಸ ಸಿಗುವವರೆಗೂ ಯುವ ನಿಧಿ ನೀಡಲಾಗುತ್ತಿದೆ. 

ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದರು.ಗ್ಯಾರಂಟಿ ಯೋಜನೆಗಳು ರಾಜ್ಯದ ಬಹುದೊಡ್ಡ ಯೋಜನೆಗಳು. ಇವುಗಳನ್ನು ನೀಡಿ, ಜೊತೆಗೆ ಅಭಿವೃದ್ಧಿಗೆ ಪೂರಕ ಹಣವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ನೀಡುತ್ತಿದೆ. 

ಮುಂಬರುವ ಬಜೆಟ್ ಸಹ ಜನಪರ ಆಗಿರಲಿದೆ ಎಂದರು.ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರಪಾಷ ಪಲ್ಟನ್, ಜಿ.ಪಂ ಮಾಜಿ ಸದಸ್ಯರಾದ ಪ್ರಸನ್ನ ಗಡಾದ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ರೆಡ್ಡಿ ಗಲಬಿ, ಜಿಲ್ಲಾ ಪ.ಜಾತಿ ಘಟಕದ ಅಧ್ಯಕ್ಷ ಪರಶುರಾಮ ಕೆರೆಹಳ್ಳಿ, ತಾಲೂಕು ಪ.ಜಾತಿ ಘಟಕ ಅಧ್ಯಕ್ಷ ಗಾಳೆಪ್ಪ ಪೂಜಾರ.

ಜಿಲ್ಲಾ ಮಹಿಳಾ ಕಾಮಂಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ, ಮಹಿಳಾ ಗ್ರಾಮೀಣ ಬ್ಲಾಕ್ ಕಾಂಗ್ರಸ್ ಅಧ್ಯಕ್ಷೆ ರೇಷ್ಮಾ ಖಾಜಾವಲಿ, ಸವಿತಾ ಗೋರಂಟ್ಲಿ ಮುಖಂಡರಾದ ಜಿಲ್ಲಾ ಅಲ್ಪಸಂಖ್ಯಾತರ ಸಮಿತಿ ಅಧ್ಯಕ್ಷ ಸಲೀಂ ಅಳವಂಡಿ, ಇಂದಿರಾ ಬಾವಿಕಟ್ಟಿ, ಮಲ್ಲಿಕಾರ್ಜುನ ಪೂಜಾರ ಇದ್ದರು.