ಜನವರಿ ೫ರಂದು ಹುಬ್ಬಳ್ಳಿಯಲ್ಲಿ ನಡೆದ ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರಿಗೆ ಗೌರವ ನೀಡುವ ಸಮಾಜದಲ್ಲಿ, ರಾಜಕೀಯ ದ್ವೇಷಕ್ಕಾಗಿ ಒಬ್ಬ ಮಹಿಳೆಯ ಮೇಲೆ ಸಾರ್ವಜನಿಕವಾಗಿ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧ ಎಂದು ಹೇಳಿದರು. ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ನೀಡಿದ ದೂರಿನ ನೆಪದಲ್ಲಿ ಪೊಲೀಸರು ತಮ್ಮ ದರ್ಪ ತೋರಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಘಟನೆಯನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಈ ವೇಳೆ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹಾಸನ

ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತ ಹಂಡಿ ಅವರನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆಯನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಈ ವೇಳೆ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಲೂರು ತಾಲೂಕು ಮಂಡಲ ಅಧ್ಯಕ್ಷೆ ಉಮಾ ಅವರು ಮಾಧ್ಯಮದೊಂದಿಗೆ ಮಾತನಾಡಿ, ಜನವರಿ ೫ರಂದು ಹುಬ್ಬಳ್ಳಿಯಲ್ಲಿ ನಡೆದ ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರಿಗೆ ಗೌರವ ನೀಡುವ ಸಮಾಜದಲ್ಲಿ, ರಾಜಕೀಯ ದ್ವೇಷಕ್ಕಾಗಿ ಒಬ್ಬ ಮಹಿಳೆಯ ಮೇಲೆ ಸಾರ್ವಜನಿಕವಾಗಿ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧ ಎಂದು ಹೇಳಿದರು. ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ನೀಡಿದ ದೂರಿನ ನೆಪದಲ್ಲಿ ಪೊಲೀಸರು ತಮ್ಮ ದರ್ಪ ತೋರಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಪೊಲೀಸ್ ಇಲಾಖೆಯ ಮೇಲೆ ಸರ್ಕಾರದ ಹಿಡಿತ ಇಲ್ಲದಿರುವುದಕ್ಕೆ ಇದೇ ಸಾಕ್ಷಿ ಎಂದು ಟೀಕಿಸಿದರು. ಇದಲ್ಲದೆ, ಜೀವಂತ ಜನಪ್ರತಿನಿಧಿಗೆ ಶ್ರದ್ಧಾಂಜಲಿ ಪೋಸ್ಟ್ ಹಾಕಿರುವ ಬಿಲ್ಲವ ಸಂದೇಶ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸುಳ್ಯದ ಶಾಸಕಿ ಭಾಗಿರತಿ ಮುರುಳ್ಯ ಅವರ ಬಗ್ಗೆ ಅವಮಾನಕಾರಕ ಪೋಸ್ಟ್ ಹಾಕಿರುವುದು ತೀವ್ರ ಖಂಡನೀಯ. ಇದು ದಲಿತ ಮಹಿಳಾ ಶಾಸಕರಿಗೆ ಮಾಡಿದ ಅಪಮಾನವಾಗಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಪೊಲೀಸ್ ವ್ಯವಸ್ಥೆ ಕಾನೂನು ಸುವ್ಯವಸ್ಥೆ ಕಾಪಾಡಲು ಇರಬೇಕೇ ಹೊರತು ಗೂಂಡಾಗಿರಿಗೆ ಅಲ್ಲ. ಮಹಿಳೆಯರ ಮೇಲೆ ದರ್ಪ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ, ಗೃಹ ಸಚಿವರು ಈ ಪ್ರಕರಣದ ಕುರಿತು ಕೂಲಂಕುಷ ತನಿಖೆ ನಡೆಸಬೇಕು. ಇಂತಹ ಘಟನೆಗಳು ಮುಂದುವರಿಯದಂತೆ ಸರ್ಕಾರ ಎಚ್ಚರ ವಹಿಸಬೇಕು ಹಾಗೂ ಅನ್ಯಾಯಕ್ಕೊಳಗಾದ ಬಿಜೆಪಿ ಕಾರ್ಯಕರ್ತರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಬಿ.ಎಂ. ನೇತ್ರಾವತಿ ಮಂಜುನಾಥ್, ಜಿಲ್ಲಾ ಕಮಿಟಿ ಶೋಭಾಗಣೇಶ್, ವೇದಾವತಿ, ಕಾರ್ಯದರ್ಶಿ ಅಂಬಿಕಾ, ವೀಣಾ ಲೋಕೇಶ್, ರೇಖಾ ವಿರುಪಾಕ್ಷ, ಗಿರೀಶ್, ಚನ್ನಕೇಶವ, ಶೋಭನ್ ಬಾಬು ಇತರರು ಉಪಸ್ಥಿತರಿದ್ದರು.