ಸಾರಾಂಶ
ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ತೊಂದರೆ ಕೊಡುವ ಕೆಲಸವನ್ನು ಮಾಡುತ್ತಿದೆ. ಅದರಲ್ಲೂ ಅಲ್ಪಸಂಖ್ಯಾತರ ಓಲೈಕೆ ಮಾಡಿ ಹಿಂದೂ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿದೆ. ಹದಗೆಟ್ಟಿರುವ ಆಡಳಿತ ಯಂತ್ರ ಹಾಗೂ ಅಭಿವೃದ್ಧಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಫೆ.6ರಂದು ಕಾರ್ಕಳ ತಾಲೂಕು ಕಚೇರಿಯ ಮುಂದೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿದರು.
ಅವರು ಕಾರ್ಕಳದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಕಂದಾಯ ಇಲಾಖೆಯ 9/11 ಸಮಸ್ಯೆಗಳು, ಪಡಿತರ ಚೀಟಿ ರದ್ದತಿ ಹಾಗೂ ದ್ವೇಷ ರಾಜಕರಣವೂ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಹದಗೆಟ್ಟ ವ್ಯವಸ್ಥೆಯ ವಿರುದ್ದ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗೇರು ನಿಗಮದ ಮಾಜಿ ಅಧ್ಯಕ್ಷ ಮಣಿರಾಜ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ತಾಲೂಕು ವಕ್ತಾರ ರವೀಂದ್ರ ಮೊಯ್ಲಿ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸುರೇಶ್ ಶೆಟ್ಟಿ ಶಿವಪುರ ಮತ್ತಿತರರು ಉಪಸ್ಥಿತರಿದ್ದರು.