ಸಾರಾಂಶ
- ವಕ್ಫ್ ಮಂಡಳಿ ಸಂತ್ರಸ್ತರಿಗೆ ಬಿಜೆಪಿ ಸಹಾಯವಾಣಿ: ರಾಜಶೇಖರ ನಾಗಪ್ಪ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ನಾಡಿನ ರೈತರ ಜಮೀನು, ಮಠಗಳು, ಮಂದಿರಗಳ ಜಾಗಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನ.4ರಂದು ದಾವಣಗೆರೆ ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11 ಗಂಟೆಗೆ ಜಿಲ್ಲಾ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಬಿಜೆಪಿಯಷ್ಟೇ ಅಲ್ಲ, ರೈತಪರ ಸಂಘಟನೆಗಳು, ವಿವಿಧ ಸಂಘಟನೆಗಳು, ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಜನರು, ವಿವಿಧ ವೃತ್ತಿ ಬಾಂಧವರು ಪಾಲ್ಗೊಂಡು, ಹಿಂದುಗಳ ಆಸ್ತಿಗಳ ಕಬಳಿಸಲು ಹೊರಟ ವಕ್ಫ್ ಮಂಡಳಿ ನಡೆ ಖಂಡಿಸಲಿದ್ದಾರೆ ಎಂದರು.
ಸಚಿವ ಜಮೀರ್ ಅಹಮದ್ ಸೂಚನೆಯಂತೆ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ರೈತರ ಪಹಣಿಗಳಲ್ಲಿ ವಕ್ಫ್ ಮಂಡಳಿ ಹೆಸರು ನಮೂದಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯವ್ಯಾಪಿ ಹೋರಾಟಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ನ.4ರಂದು ಬೆಳಗ್ಗೆ 11 ಗಂಟೆಗೆ ರಾಜ್ಯವ್ಯಾಪಿ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟಿಸಲಾಗುತ್ತಿದೆ ಎಂದು ಹೇಳಿದರು.ಪಹಣಿ ಕಾಲಂ 11ರಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಿಸುವ ಮೂಲಕ ಆಸ್ತಿ ಕಬಳಿಸಲಾಗುತ್ತಿದೆ. ಯಾವುದೇ ರೈತರು, ಇತರರು ವಕ್ಫ್ ಬೋರ್ಡ್ ಹೆಸರಿನಲ್ಲಿ ಆಸ್ತಿ ಕಳೆದುಕೊಂಡಿದ್ದರೆ, ಇಲ್ಲವೇ ಸಮಸ್ಯೆಗಳನ್ನು ಹೊಂದಿದ್ದರೆ ಅಂತಹವರ ನೆರವು, ಹೋರಾಟಕ್ಕಾಗಿ ಜಿಲ್ಲಾ ಬಿಜೆಪಿ ಪಹಣಿ ಪರಿಶೀಲನಾ ಅಭಿಯಾನ ಕೈಗೊಂಡಿದೆ. ಯಾರೇ ಆಗಿರಲಿ, ವಕ್ಫ್ ಬೋರ್ಡ್‌ನಿಂದ ಸಮಸ್ಯೆಗಳಿಗೆ ಸಿಲುಕಿದ್ದಲ್ಲಿ ಮೊ: 98450-95092 ನಂಬರ್‌ಗೆ ಕರೆ ಮಾಡಿ ಅಥವಾ ವಾಟ್ಸಪ್ ಮೂಲಕ ಮಾಹಿತಿ ನೀಡಬಹುದು. ಅಂತಹ ರೈತರು, ಜನರ ಪರವಾಗಿ ಬಿಜೆಪಿ ಹೋರಾಟ ನಡೆಸಲಿದೆ. ಆ ಸಂತ್ರಸ್ತರಿಗೆ ಬಿಜೆಪಿಯಿಂದ ಕಾನೂನು ಹೋರಾಟಕ್ಕೆ ಬೇಕಾದ ಎಲ್ಲ ನೆರವು ನೀಡಲಿದೆ ಎಂದರು.
- - - -3ಕೆಡಿವಿಜಿ1:ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.