ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ

| Published : Jun 21 2024, 01:09 AM IST

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಗುರುವಾರ ಇಲ್ಲಿಯ ಹೊಸಮನಿ ಸಿದ್ದಪ್ಪ ಸರ್ಕಲ್‌ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಹಾವೇರಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಗುರುವಾರ ಇಲ್ಲಿಯ ಹೊಸಮನಿ ಸಿದ್ದಪ್ಪ ಸರ್ಕಲ್‌ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಈಗಾಗಲೇ ರಾಜ್ಯ ಜನರು ಕಾಂಗ್ರೆಸ್‌ನ ಗ್ಯಾರಂಟಿ ಹಾಗೂ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ತೈಲ ಬೆಲೆ ಹೆಚ್ಚಿಸಿದ್ದರಿಂದ ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ. ಈಗಾಗಲೇ ಅನೇಕ ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಜನರ ಸ್ಥಿತಿ ದುಸ್ತರವಾಗಿದೆ. ಇದು ಕಾಂಗ್ರೆಸ್‌ನಿಂದ ಜನರಿಗೆ ಮಾಡಿದ ಮಹಾ ಮೋಸವಾಗಿದೆ. ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ೧೮೭ ಕೋಟಿ ರು.ಗಳನ್ನು ಅನೇಕ ಬೋಗಸ್‌ ಖಾತೆಗಳಿಗೆ ವರ್ಗಾವಣೆ ಮಾಡಿ ಲೋಕಸಭಾ ಚುನಾವಣೆ ನಿರ್ವಹಣೆ ಮಾಡಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆರೋಪಿಸಿದರು.

ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಮಧ್ಯಮ ವರ್ಗದವರಿಗೆ ಮತ್ತು ಬಡವರಿಗೆ ಸಾಕಷ್ಟು ತೊಂದರೆಯಾಗಿದೆ. ಬಡವರ ಜೀವನವನ್ನು ಸುಧಾರಿಸುವ ಬದಲು ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಮೋಸದ ಗ್ಯಾರಂಟಿಗಳಿಂದ ನಡೆಯುತ್ತಿದೆ. ಎಲ್ಲ ಸಮುದಾಯಗಳ ಅನುದಾನ ಕಡಿತಗೊಳಿಸಿ ಇಲಾಖೆಗಳ ಹಣ ಲಪಟಾಯಿಸಲು ಮುಂದಾಗಿದೆ. ಕಾಂಗ್ರೆಸ್ಸಿನ ಭಾಗ್ಯಗಳು ತುಟ್ಟಿ ಭಾಗ್ಯಗಳಾಗಿ ಮಾರ್ಪಾಡಾಗಿವೆ ಎಂದು ಟೀಕಿಸಿದರು.

ಜಿಲ್ಲಾ ಉಪಾಧ್ಯಕ್ಷ ಸುರೇಶ ಹೊಸಮನಿ ಮತ್ತು ಗ್ರಾಮೀಣ ಮಂಡಲ ಅಧ್ಯಕ್ಷರಾದ ಬಸವರಾಜ ಕಳಸೂರ ಮಾತನಾಡಿದರು. ಪ್ರಕಾಶ ಉಜನಿಕೊಪ್ಪ, ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ಗ್ರಾಮೀಣ ಮಂಡಲ ಅಧ್ಯಕ್ಷ ಬಸವರಾಜ ಕಳಸೂರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ನಗರ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಭರಡಿ, ರಾಜಾರಾಮ ಕುಲಕರ್ಣಿ, ಸತೀಶ ಗೌಳಿ, ಲಲಿತಾ ಗುಂಡೇನಹಳ್ಳಿ, ಲತಾ ಬಡ್ನಿಮಠ, ಚನ್ನಮ್ಮ ಬ್ಯಾಡಗಿ, ಚನ್ನಮ್ಮ ಪಾಟೀಲ, ಪುಷ್ಪಾ ಚಕ್ರಸಾಲಿ, ರುದ್ರೇಶ ಚಿನ್ನಣ್ಣನವರ, ಜಗದೀಶ ಮಲಗೋಡ, ಶಿವಯೋಗಿ ಹುಲಿಕಂತಿಮಠ ಇತರರು ಇದ್ದರು.