ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ: 1974ರ ವಕ್ಫ್ ಗೆಜೆಟ್ ರದ್ದುಗೊಳಿಸುವಂತೆ ಆಗ್ರಹಿಸಿ ನ.22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವ ಜಮೀರ್ ಅಹ್ಮದ ಖಾನ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸಿ ಪಹಣಿಯಲ್ಲಿ ವಕ್ಫ್ ಹೆಸರು ಸೇರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಹೇಳುತ್ತಿದ್ದೇನೆ ಎಂದು ಅಧಿಕಾರಿಗಳಿಗೆ ಒತ್ತಡ ಹೇರಿದ್ದರು. ಈಗಾಗಲೇ ವಿಜಯಪುರ ಸೇರಿ ರಾಜ್ಯಾದ್ಯಂತ ಅನೇಕ ರೈತ ಕುಟುಂಬಗಳು ಮಠ ಮಾನ್ಯಗಳ ಆಸ್ತಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ. ಇದನ್ನು ಕಂಡು ರೈತ ಸಮೂಹ ಆತಂಕಕ್ಕೀಡಾಗಿತ್ತು. ನಂತರ ಸಿಎಂ ಸಿದ್ದ ರಾಮಯ್ಯ ರೈತರಿಗೆ ನೀಡಿದ ವಾಪಸ್ ಹಿಂಪಡೆಯಲು ತಿಳಿಸಿದಾಗಲೂ ದಾಖಲೆಯಲ್ಲಿ ವಕ್ಫ್ ಹೆಸರು ಇತ್ತು. ಆದ್ದರಿಂದ 1974ರ ವಕ್ಫ್ ಆಸ್ತಿ ಗೆಜೆಟ್ ಸಂಪೂರ್ಣ ರದ್ದು ಆಗುವರೆಗೂ ಈ ಹೋರಾಟ ನಿಲ್ಲಿಸುವುದಿಲ್ಲ. ಈ ಧರಣಿ ಸತ್ಯಾಗ್ರಹಕ್ಕೆ ರೈತ ನಾಯಕರು, ರೈತ ಸಂಘಟನೆಗಳು, ಮಠಾಧೀಶರು, ರೈತ ಪರ ಚಿಂತಕರು ಪಾಲ್ಗೊಳ್ಳಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಜಿಲ್ಲೆಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಮುಖಂಡರು ಕಾರ್ಯಕರ್ತರು ಮಹಿಳಾ ಮುಖಂಡರು ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.