ಹಾವೇರಿ: ನವದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗ ಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಬತ್ತಲೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆ ಕೂಗಿ ಶೃಂಗಸಭೆಗೆ ಅಡ್ಡಿಪಡಿಸಿದ್ದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ದೇಶದ ಅನೇಕ ಹಂತಗಳಲ್ಲಿ ಕಾಂಗ್ರೆಸ್ ಅವನತಿಯತ್ತ ಸಾಗಿದೆ. ರಾಹುಲ್ ಗಾಂಧಿಯವರು ತಮ್ಮ ಹತಾಶೆ ಮನೋಭಾವನೆಯಿಂದ ದೇಶ ವಿರೋಧಿ ಕೃತ್ಯಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸರ್ವತೋಮುಖ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದರೆ, ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆಯಾಗಿ ಮೋದಿ ವಿರುದ್ಧ ಪ್ರತಿಭಟನೆ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ದೂರಿದರು.ವಿಧಾನಸಭಾ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ದೇಶದ ಅಪ್ರಬುದ್ಧ ರಾಜಕಾರಣಿ ರಾಹುಲ್ ಗಾಂಧಿಯವರ ಸೂಚನೆ ಮೇರೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಗೆ ನುಗ್ಗಿ ವಿರೋಧಿಸಿರುವುದು ನಾಚಿಕೆಗೇಡಿನ ಸಂಗತಿ ಎಂದ ಅವರು, ದೇಶ ನರೇಂದ್ರ ಮೋದಿಜೀಯವರ ನೇತೃತ್ವದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಪಥದಲ್ಲಿ ಸಾಗಿ ಇವತ್ತು ಜಗತ್ತಿನ ೪ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ದೇಶ ಹೊರಹೊಮ್ಮಿದೆ ಎಂದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೀಲಪ್ಪ ಚಾವಡಿ, ಜಿಲ್ಲಾ ವಕ್ತಾರ ನಿರಂಜನ ಹೇರೂರ, ವಿಜಯಕುಮಾರ ಚಿನ್ನಿಕಟ್ಟಿ, ಕಿರಣ ಕೊಳ್ಳಿ, ಕಿರಣ ಕೋಣನವರ, ವಿದ್ಯಾ ಶೆಟ್ಟಿ, ಮಂಜುನಾಥ ಮಲಗೋಡ, ರೋಹಿಣಿ ಪಾಟೀಲ, ವಿನಯ ತಹಸೀಲ್ದಾರ್, ಕರಬಸಪ್ಪ ಹಳದೂರ, ಅಲ್ಲಾಭಕ್ಷ ತಿಮ್ಮಾಪೂರ, ರುದ್ರೇಶ ಚಿನ್ನಣ್ಣನವರ, ಮುತ್ತಣ್ಣ ಮುಷ್ಠಿ, ನಿಖಿಲ್ ಡೊಗ್ಗಳ್ಳಿ, ಚಿಕ್ಕಪ್ಪ ದೊಡ್ಡತಳವಾರ, ಬಸವರಾಜ ಹಾಲಪ್ಪನವರ, ಈರಣ್ಣ ಹೊನ್ನಾಳಿ, ಪ್ರದೀಪ ಗೌಡರ, ರಘು ಮುತ್ತಳ್ಳಿ, ರಾಮಕ್ಕ ಮುತ್ತಳ್ಳಿ, ರಾಜಣ್ಣ ಡೊಳ್ಳಿನ, ಹನುಮಂತಪ್ಪ ಪೂಜಾರ, ರಾಜು ಮುಂಡಾಸದ, ನಿಖಿಲ್ ಹಿರೇಮಠ, ದೀಪಕ್ ಮಡಿವಾಳರ ಹಾಗೂ ನಗರಸಭೆಯ ಮಾಜಿ ಸದಸ್ಯರು, ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.