ಡಿಸಿಎಂ ಡಿಕೆಶಿ ವಿರುದ್ಧ ಬಿಜೆಪಿ ಪ್ರತಿಭಟನೆ

| Published : Mar 26 2025, 01:36 AM IST

ಡಿಸಿಎಂ ಡಿಕೆಶಿ ವಿರುದ್ಧ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಸ್ಲಿಂರಿಗಾಗಿ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೀಡಿರುವ ಹೇಳಿಕೆ ಖಂಡಿಸಿ ನಗರದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಸ್ಲಿಮರಿಗಾಗಿ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೀಡಿರುವ ಹೇಳಿಕೆ ಖಂಡಿಸಿ ನಗರದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಾಜಿ ಶಾಸಕ ಸಂಜಯ ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ ಅ‍ವರ ಪ್ರತಿಕೃತಿಯನ್ನು ದಹನಗೊಳಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್‌ ಸರ್ಕಾರ ಓಟ ಬ್ಯಾಂಕ್‌ಗಾಗಿ ಮುಸ್ಲಿಮರನ್ನು ಓಲೈಕೆ ಮಾಡುತ್ತಿದೆ. ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಅಸಂಖ್ಯಾತ ಹಿಂದುಗಳಿಗೆ ರಾಜ್ಯಸರ್ಕಾರ ಅನ್ಯಾಯ ಮಾಡಿದೆ. ಈಗ ಮುಸ್ಲಿಮರಿಗಾಗಿ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅ‍ವರು ಬಹಿರಂಗವಾಗಿ ಕ್ಷಮೆಕೇಳಬೇಕು ಎಂದು ಆಗ್ರಹಿಸಿದರು.ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಯುವರಾಜ ಜಾಧವ, ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಗುರುಪ್ರಸಾದ ಕೋತಿನ್, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಬಿಜೆಪಿ ಮುಖಂಡರಾದ ವಿಠ್ಠಲ ಸಾಯನ್ನವರ, ವೀರಭದ್ರಯ್ಯ ಪೂಜಾರ, ಮಲ್ಲಪ್ಪಾ ಕಾಂಬಳೆ, ಮಾರುತಿ ಜೋಗಾನಿ, ವಿಕ್ರಮ ಸೋನಜಿ, ರಾಜದೀಪ ಜಾಧವ,ಅಡವೇಶ ಅಂಗಡಿ, ನಿತಿನ್ ದೇಸಾಯಿ ಪಿರಾಜಿ ಕಣಬರ್ಗಿ, ಶೇಖರ ಕಾಲೇರಿ, ಅಭಯ ಅವಲಕ್ಕಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.