ಸಾರಾಂಶ
ಮುಸ್ಲಿಂ ಓಟಿನ ತುಷ್ಟೀಕರಣಕ್ಕಾಗಿ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ದುರಂಕಾರದಿಂದ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವರ್ತನೆ ಸಂವಿಧಾನ ವಿರೋಧಿಯಾಗಿದೆ. ಡಾ. ಅಂಬೇಡ್ಕರ್ ಅವರೇ ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದಾರೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಜಗಳೂರು
ಮುಸ್ಲಿಂ ಓಟಿನ ತುಷ್ಟೀಕರಣಕ್ಕಾಗಿ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ದುರಂಕಾರದಿಂದ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವರ್ತನೆ ಸಂವಿಧಾನ ವಿರೋಧಿಯಾಗಿದೆ. ಡಾ. ಅಂಬೇಡ್ಕರ್ ಅವರೇ ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದಾರೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.ಡಿಸಿಎಂ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು ಕಾಂಗ್ರೆಸ್ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದೆ ಡಿ.ಕೆ.ಶಿ. ಅವರಿಗೆ ಅಧಿಕಾರದ ದರ್ಪ ಹೆಚ್ಚಾಗಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಎಚ್.ಪಿ. ರಾಜೇಶ್, ತುಪ್ಪದಹಳ್ಳಿ ಪೂಜಾರಿ ಸಿದ್ದಪ್ಪ, ಮಾತನಾಡಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್, ಪಪಂ ಅಧ್ಯಕ್ಷ ನವೀನ್ ಕುಮಾರ್, ಶಿವಕುಮಾರ್ ಸ್ವಾಮಿ, ತಾಪಂ ಮಾಜಿ ಸದಸ್ಯರಾದ ಸೂರಲಿಂಗಪ್ಪ, ಎಸ್.ಬಿ. ಕುಬೇಂದ್ರಪ್ಪ, ಜೆ.ವಿ.ನಾಗರಾಜ್, ಸದಸ್ಯ ಪಾಪಲಿಂಗ, ಮುಖಂಡರಾದ ಮರುಳಾರಾಧ್ಯ, ತಾಯಿಟೋಣಿ ಅರವಿಂದ್ ಪಟೇಲ್, ಕ್ಯಾಂಪ್ ರೇವಣ್ಣ, ಹೊನ್ನೂರು ಸ್ವಾಮಿ, ಅನಿಲ್ ಕುಮಾರ್, ಬಂಕ್ ರಾಜಣ್ಣ, ಸಿದ್ದಪ್ಪ, ಹುಚ್ಚವ್ವನಹಳ್ಳಿ ಮಹೇಶ್ ಇತರರು ಇದ್ದರು.- - - -23 ಜೆ.ಜಿ.ಎಲ್.2: