ಸಾರಾಂಶ
ಗದಗ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ನಗರದ ಜಿಲ್ಲಾಡಳಿತ ಭವನದ ಎದುರುಗಡೆ ಬುಧವಾರ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಗ್ರಹಿಸಿದರು.ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಮುಡಾ ಹಗರಣ ಕುರಿತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.19ರಂದು ವಿಪ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಅವರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಕೂಡಲೇ ಗವರ್ನರ್ ವಾಪಸ್ ಹೋಗಬೇಕು. ಹೋಗದಿದ್ದರೆ ಬಾಂಗ್ಲಾ ದೇಶದಲ್ಲಿ ನಡೆದಂತೆ, ಗವರ್ನರ್ ಆಫೀಸ್‌ಗೆ, ಗವರ್ನರ್ ಮನೆಗೆ ನುಗ್ಗುವ ಕೆಲಸ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಾಗುತ್ತದೆ. ಮಾನ ಮರ್ಯಾದೆ ಇದ್ದರೆ ಗವರ್ನರ್ ಅವರನ್ನು ವಾಪಸ್ ಕರೆಸಬೇಕು ಮತ್ತು ಅವರು ರಾಜ್ಯ ಬಿಟ್ಟು ತೋಲಗಬೇಕು ಎಂದು ರಾಷ್ಟ್ರ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಇನ್ನೂ ಹಲವು ಕಾಂಗ್ರೆಸ್ ನಾಯಕರು ಇದೀ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು.
ರಾಷ್ಟ್ರ ವಿರೋಧಿ ಹೇಳಿಕೆಗಳನ್ನು ನೀಡಿರುವ ವಿಪ ಸದಸ್ಯ ಐವಾನ್ ಡಿಸೋಜಾ ಹಾಗೂ ಸಚಿವ ಜಮೀರ ಅಹ್ಮದ ಅವರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರವನ್ನು ವಜಾಗೊಳಿಸಿ ಕರ್ನಾಟಕದಲ್ಲಿ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಪಕ್ಷದ ಹಿರಿಯರಾದ ಎಂ.ಎಸ್. ಕರೀಗೌಡ್ರ ಮಾತನಾಡಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕಿರೇಶ ರಟ್ಟಿಹಳ್ಳಿ, ವಿಜಯಕುಮಾರ ಗಡ್ಡಿ, ಶ್ರೀಪತಿ ಉಡುಪಿ, ಸಿದ್ದು ಪಲ್ಲೇದ, ಎಂ.ಎಂ. ಹಿರೇಮಠ, ಬಿ.ಎಸ್. ಚಿಂಚಲಿ, ಸಂತೋಷ ಅಕ್ಕಿ, ರಾಘವೇಂದ್ರ ಯಳವತ್ತಿ, ವಿನಾಯಕ ಮಾನ್ವಿ, ಚಂದ್ರು ತಡಸದ, ಶಿವಕುಮಾರ ನೀಲಗುಂದ, ಅಶೋಕ ಕೆರೂರ, ಲಕ್ಷ್ಮಣ ದೊಡ್ಮನಿ, ಬೂದಪ್ಪ ಹಳ್ಳಿ, ಅಶ್ವಿನಿ ಜಗತಾಪ, ನಿರ್ಮಲಾ ಕೊಳ್ಳಿ, ಲಕ್ಷ್ಮೀ ಕಾಕಿ, ವಿದ್ಯಾವತಿ ಗಡಗಿ, ಸ್ವಾತಿ ಅಕ್ಕಿ, ವಂದನಾ ವರ್ಣೇಕರ, ಶಂಕರ ಕಾಕಿ, ಅಮರನಾಥ ಗಡಗಿ, ನಾಗರಾಜ ತಳವಾರ ಸೇರಿದಂತೆ ಪ್ರಮುಖರು ಇದ್ದರು.