ಶಾಸಕರ ವೈಫಲ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

| Published : Jul 12 2025, 12:32 AM IST

ಶಾಸಕರ ವೈಫಲ್ಯ ವಿರುದ್ಧ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ ಧರೆಕೊಪ್ಪದಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ

ಶೃಂಗೇರಿ ಧರೆಕೊಪ್ಪದಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ

ಕನ್ನಡಪ್ರಭ ವಾರ್ತೆ, ಶೃಂಗೇರಿ:

ತಾಲೂಕಿನ ಧರೆಕೊಪ್ಪದಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಹಾಗೂ ಕ್ಷೇತ್ರದ ಶಾಸಕರ ವೈಫಲ್ಯತೆ ಖಂಡಿಸಿ ಭಾರತೀಯ ಜನತಾ ಪಕ್ಷ ಧರೆಕೊಪ್ಪ ಶಕ್ತಿ ಕೇಂದ್ರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿಗಳ ಮೂಲಕ ಜನರಿಗೆ ತಲುಪಬೇಕಾದ ಸರ್ಕಾರದ ಯೋಜನೆಗಳು ತಲುಪುತ್ತಿಲ್ಲ. 94 ಸಿ ಹಕ್ಕು ಪತ್ರಗಳು, ನಮೂನೆ 50,53,57 ರ ಅರ್ಜಿಗಳು ಬಾಕಿ ಉಳಿದಿವೆ. ಆಡಳಿತ ಯಂತ್ರ ಕುಸಿದು ಬಿದ್ದಿದೆ. ಕ್ಷೇತ್ರದಲ್ಲಿ,ರಾಜ್ಯದಲ್ಲಿ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿಲ್ಲ. ಕ್ಷೇತ್ರದ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಸ್ಥಳೀಯ ಮುಖಂಡ ಚೇತನ್ ಹೆಗ್ಡೆ,ಸುರೇಶ್ ಜಟಿಗೇಶ್ವರ್,ತಲಗಾರು ಉಮೇಶ್,ಹಂಚಲಿ ರಾಘವೇಂದ್ರ,ತಲಗಾರು ಉಮೇಶ್ ಮತ್ತಿತರರು ಉಪಸ್ಥಿತರಿದ್ದರು .ಪಿಡಿಒ ಮೂಲಕ ಮನವಿ ಸಲ್ಲಿಸಲಾಯಿತು.

11 ಶ್ರೀ ಚಿತ್ರ 1-

ಶೃಂಗೇರಿ ತಾಲೂಕಿನ ಧರೆಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರು ಸರ್ಕಾರದ ಜನವಿರೋಧಿ ನೀತಿ,ಶಾಸಕರ ವೈಪಲ್ಯತೆ ಖಂಡಿಸಿ ಪ್ರತಿಭಟನೆ ನಡೆಸಿದರು.