ಸಾರಾಂಶ
ದಲಿತ, ಮುಸ್ಲಿಂ, ಎಸ್ಟಿ ಹಾಗೂ ಸಿಖ್ ಸಮುದಾಯದ ಮತಗಳನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎನ್ನುವ ನಿಜಬಣ್ಣವನ್ನು ದೇಶದ ಜನತೆ ತಿಳಿಯಬೇಕಾಗಿದೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿದರು.
ಕನ್ನಡಪ್ರಭವಾರ್ತೆ ಕೊಲ್ಹಾರ
ದಲಿತ, ಮುಸ್ಲಿಂ, ಎಸ್ಟಿ ಹಾಗೂ ಸಿಖ್ ಸಮುದಾಯದ ಮತಗಳನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎನ್ನುವ ನಿಜಬಣ್ಣವನ್ನು ದೇಶದ ಜನತೆ ತಿಳಿಯಬೇಕಾಗಿದೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿದರು.ಕಾಂಗ್ರೆಸ್ ಪಕ್ಷದ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಮೇರಿಕಾದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕ ಕರೆ ನೀಡಿರುವ ಪ್ರತಿಭಟನೆ ಅಂಗವಾಗಿ ಕೊಲ್ಹಾರ ಪಟ್ಟಣದಲ್ಲಿ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡುತ್ತಿದ್ದರು. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್ಸಿ,ಎಸ್ಟಿ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳಿಕೆ ಕೊಟ್ಟಿರುವದು ಹಾಸ್ಯಾಸ್ಪದ ಎನಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಪಟ್ಟಣ ಪಂಚಾಯತಿ ಸದ್ಯಸ್ಯರಾದ ಶ್ರಿಶೈಲ ಅಥಣಿ, ಅಪ್ಪಸಿ ಮಟ್ಟಿಹಾಳ, ಬಾಬು ಭಜಂತ್ರಿ ಪ್ರಶಾಂತ ಪವಾರ, ಸಿದ್ರಾಮಪ್ಪ ಕಾಖಂಡಕಿ, ಡೊಂಗ್ರಿ ಸಾಳುಂಕೆ, ಚಿದಾನಂದ ದಳವಾಯಿ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.