ಸಂವಿಧಾನ ಬದಲಿಸುವ ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

| Published : Mar 26 2025, 01:35 AM IST

ಸಂವಿಧಾನ ಬದಲಿಸುವ ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಮಂಗಳವಾರ ಬಿಜೆಪಿ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಧಾರವಾಡ: ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಮಂಗಳವಾರ ಬಿಜೆಪಿ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿಯ ಜ್ಯುಬಲಿ ವೃತ್ತದಲ್ಲಿ ಅವರ ಪ್ರತಿಕೃತಿ ದಹಿಸಿ, ಕೆಲ ಹೊತ್ತು ರಸ್ತೆ ಬಂದ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿ ಉಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಆಗ್ರಹಿಸಲಾಯಿತು. ಸಂವಿಧಾನ ಉಳಿಸುವುದಾಗಿ ಬರೀ ಹೇಳಿಕೆ ನೀಡುವ ಕಾಂಗ್ರೆಸ್‌ ಸರ್ಕಾರ ಇದೀಗ ಸಂವಿಧಾನ ಬದಲಿಸುವ ರಹಸ್ಯ ಮಾರ್ಗಸೂಚಿಯನ್ನು ಅನುಸರಿಸುತ್ತಿದೆ. ಅದರ ಪರಿಣಾಮ ಉಪ ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ. ಜೊತೆಗೆ ಈ ಹೇಳಿಕೆ ಸಂವಿಧಾನ ರಚನೆಕಾರ ಡಾ. ಬಿ.ಆರ್‌. ಅಂಬೇಡ್ಕರ್ ಅವರಿಗೂ ಅಪಮಾನ ಮಾಡಿದಂತಾಗಿದೆ. ಈ ಹೇಳಿಕೆಯನ್ನು ಬಿಜೆಪಿ ಸಹಿಸುವುದಿಲ್ಲ. ಸಾರ್ವಜನಿಕವಾಗಿ ಅವರ ಕ್ಷಮೆ ಕೇಳಬೇಕೆಂದು ಬಿಜೆಪಿ ಮುಖಂಡರು ಆಗ್ರಹಿಸಿದರು.

ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ಅನುಕೂಲವಾಗುವಂತೆ ಸಂವಿಧಾನ ಬದಲಾಯಿಸುವ ಸುದ್ದಿ ಬರಬಹುದು ಎಂದು ಹೇಳಿರುವುದು ಖಂಡನೀಯ. ಮುಸ್ಲಿಂ ಓಲೈಕೆಗಾಗಿ ಕಾಂಗ್ರೆಸ್‌ ಸರ್ಕಾರ ಸಂವಿಧಾನ ಬದಲಿಸಿದರೂ ಅಚ್ಚರಿ ಏನಿಲ್ಲ ಎಂದು ಬಿಜೆಪಿ ಗ್ರಾಮಿಣ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಸಂಜಯ ಕಪಟಕರ, ಶಂಕರ ಶೇಳಕೆ, ಬಸವರಾಜ ಮುತ್ತಳ್ಳಿ, ಮಂಜುನಾಥ ಮಲ್ಲಿಗವಾಡ, ಮೋಹನ ರಾಮದುರ್ಗ, ಹರೀಶ ಬಿಜಾಪುರ, ಮಂಜುನಾಥ ಬಟ್ಟಣ್ಣವರ, ಶಂಕರಕುಮಾರ ದೇಸಾಯಿ, ವಿಷ್ಷು ಕೊರಳ್ಳಿ, ಶ್ರೀನಿವಾಸ ಕೊಟ್ಯಾನ, ಅಮಿತ ಪಾಟೀಲ, ಬಸವರಾಜ ಬಾಳಗಿ, ವೀರೇಶ ಹಿರೇಮಠ, ಮಂಜುನಾಥ ನಡಟ್ಟಿ ಮತ್ತಿತರರು ಇದ್ದರು.