ಬಿಜೆಪಿ ನಾಯಕರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ

| Published : Jul 13 2024, 01:35 AM IST

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು

ಕನ್ನಡಪ್ರಭ ವಾರ್ತೆ ಮಂಗಳೂರು

ನಾಲ್ಕು ಸಾವಿರ ಕೋಟಿ ರು.ಗಳ ಮೂಡಾ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ರಣಹೇಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಪ್ರತಿಭಟನಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್, ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮುಖಂಡ ನಂದನ್ ಮಲ್ಯ ಮತ್ತಿತರರಿದ್ದರು.