ರೈತರು ಬೆಳೆದ ಮೆಕ್ಕ ಜೋಳಕ್ಕೆ ಬೆಂಬಲ ಬೆಲೆ ನೀಡಿ, ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿಲ್ಲ, ರೈತರು ತಮ್ಮ ಜಮೀನಿಗೆ ಟ್ರಾನ್ಸ್‌ಫಾರ್ಮರ್‌ ಹಾಕಿಸಿಕೊಳ್ಳುಕ್ಕೆ ಬಿಜೆಪಿ ಸರ್ಕಾರ ಅವಧಿಯಲ್ಲಿ ಮೂವತ್ತು ಸಾವಿರ ಬೆಲೆ ನಿಗದಿ ಮಾಡಲಾಗಿತ್ತು ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಮೂರು ಲಕ್ಷ ಕಟ್ಟಿದರೂ ಟ್ರಾನ್ಸ್‌ಫಾರ್ಮರ್‌ ಹಾಕುತ್ತಿಲ್ಲ.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಖಂಡಿಸಿ ನಗರದಲ್ಲಿ ತಾಲೂಕು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ ನಡೆಸಿತು.ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸಮಾವೇಶಗೊಂಡು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಕೆಲ ಕಾಲ ಪ್ರತಿಭಟನಾ ಧರಣಿ ನಡೆಸಿದರು. ಬಳಿಕ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ, ಕಾಂಗ್ರೆಸ್ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.ರೈತರನ್ನು ಮರೆತ ಸರ್ಕಾರ

ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ರಾಜಶೇಖರ್ ಮಾತನಾಡಿ ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಮರೆತಿದೆ. ರೈತರ ಕಣ್ಣೀರಿಗೆ ಕಾರಣವಾಗಿದ್ದು ರೈತರ ಶಾಪ ತಟ್ಟಲಿದೆ. ಈಗಲಾದರೂ ಮೆಕ್ಕೆ ಜೋಳಕ್ಕೆ ಬೆಂಬಲ ಬೆಲೆ ನೀಡಿ ಖರೀದಿ ಕೇಂದ್ರ ಆರಂಭಿಸಲು ಎಂದು ಒತ್ತಾಯಿಸಿದರು.

ನಗರ ಘಟಕದ ಬಿಜೆಪಿ ಪಕ್ಷದ ಅಧ್ಯಕ್ಷ ಮಾರ್ಕೆಟ್ ಮೋಹನ್ ಮಾತನಾಡಿ, ರೈತರು ಬೆಳೆದ ಮೆಕ್ಕ ಜೋಳಕ್ಕೆ ಬೆಂಬಲ ಬೆಲೆ ನೀಡಿ, ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿಲ್ಲ, ರೈತರು ತಮ್ಮ ಜಮೀನಿಗೆ ಟ್ರಾನ್ಸ್‌ಫಾರ್ಮರ್‌ ಹಾಕಿಸಿಕೊಳ್ಳುಕ್ಕೆ ಬಿಜೆಪಿ ಸರ್ಕಾರ ಅವಧಿಯಲ್ಲಿ ಮೂವತ್ತು ಸಾವಿರ ಬೆಲೆ ನಿಗದಿ ಮಾಡಲಾಗಿತ್ತು ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಮೂರು ಲಕ್ಷ ಕಟ್ಟಿದರೂ ಟ್ರಾನ್ಸ್‌ಫಾರ್ಮರ್‌ ಹಾಕುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಟೋಪಿ ಹಾಕಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ. ಬಡವರು ಹಾಗೂ ಮಧ್ಯಮ ವರ್ಗಗಳ ವಿರೋಧಿಯಾಗಿರುವ ಕಾಂಗ್ರೆಸ್ ಸರ್ಕಾರ ಜನರಿಗೆ 10 ರು.ಗಳನ್ನು ನೀಡಿ, ತೆರಿಗೆಗಳ ಮೂಲಕ 100 ರು.ಗಳನ್ನು ವಸೂಲಿ ಮಾಡುತ್ತಿದೆ. ಇಂಥ ನೀತಿಗೆಟ್ಟ ಸರ್ಕಾರ ನಮಗೆ ಬೇಕಾ ಎಂದು ಪ್ರಶ್ನಿಸಿದರು.ಆಡಳಿತಯಂತ್ರ ಕುಸಿತ:

ಬಿಜೆಪಿ ಜಿಲ್ಲಾ ಘಟಕದ ಪ್ರಧಾನಕಾರ್ಯದರ್ಶಿ ಮಧುಸೂರ್ಯ ನಾರಾಯಣರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದ್ದು, ರಾಜ್ಯ ಸರ್ಕಾರ ಕುರ್ಚಿ ಜಂಜಾಟದಲ್ಲಿ ಕಲಾಹರಣ ಮಾಡುತ್ತಿದೆ. ಪ್ರತಿ ದಿನ ಟಿವಿ ಹಾಗೂ ಪತ್ರಿಕೆಗಳಲ್ಲಿ ಧಾರಾವಾಹಿ ರೂಪದಲ್ಲಿ ಅಧಿಕಾರ ಗದ್ದುಗೆ ಯಾರಿಗೆ, ನೀನಾ, ನಾನಾ ಎಂಬಂತೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹಗ್ಗಜಗ್ಗಾಟದಲ್ಲಿ ತೊಡಗಿದ್ದಾರೆ. ಇದರಿಂದ ರೈತರಜ್ವಲಂತ ಸಮಸ್ಯೆಗಳನ್ನು ಕೇಳುವವರು ಇಲ್ಲವಾಗಿದ್ದಾರೆ, ಐದು ಗ್ಯಾರಂಟಿ ನೀಡಿದ್ದೇವೆ ಎಂದು ಜನರನ್ನು ನಂಬಿಸಿ, ಖಜಾನೆಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.ಜನರ ಬದುಕು ದುಸ್ತರ

ತಾಲ್ಲೂಕು ಗ್ರಾಮಾಂತರ ಮಂಡಲದ ಅಧ್ಯಕ್ಷ ರಮೇಶ್ ರಾವ್ ಶೆಲ್ಕೆ ಮಾತನಾಡಿ ಬಿಜೆಪಿ ಅವಧಿಯಲ್ಲಿ ರೈತರ ಶ್ರೇಯೋಭಿವೃದ್ಧಿಗೆ ಜಾರಿಗೆ ತರಲಾಗಿದ್ದ ರೈತ ವಿದ್ಯಾನಿಧಿ, ಕಿಸಾನ್ ಸಮ್ಮಾನ ಯೋಜನೆ, ಡೀಸೆಲ್‌ ಸಬ್ಸಿಡಿ ಸೇರಿದಂತೆ ಎಲ್ಲ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕಿದೆ. ಇದರೊಟ್ಟಿಗೆ ತುಂತುರು ನೀರಾವರಿ ಪರಿಕರ ದರ ಹೆಚ್ಚಳ, ಟಿಸಿ ದುಬಾರಿ, ಸ್ಟ್ಯಾಂಪ್‌ ಬೆಲೆ ಹೆಚ್ಚಳ ಮಾಡಿ ರೈತರ ಬದುಕನ್ನು ದುಸ್ತರವಾಗಿಸಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಮುರುಳಿಧರ್, ಪ್ರಧಾನಕಾರ್ಯದರ್ಶಿಗಳಾದ ಕೊಡಿಲಪ್ಪ, ಹರೀಶ್ ವೇಣುಮಾದವ್, ನಗರ ಶಕ್ತಿಕೇಂದ್ರ ಅಧ್ಯಕ್ಷರಾದ ದಾಲ್ ರಮೇಶ್, ಬಂಡಪಲ್ಲಿಮೂರ್ತಿ ನಕ್ಕಲಹಳ್ಳಿ ಮಾಜಿಅಧ್ಯಕ್ಷರಾದ ರಾಜು, ಹಿರಿಯ ಕಾರ್ಯಕರ್ತರದ ಮುದ್ದುವೀರಪ್ಪ, ರಾಮಕೃಷ್ಣರೆಡ್ಡಿ,ಅಶ್ವತ್ಥರೆಡ್ಡಿ ಬಾದಿಮಳೂರು ಅಶ್ವಥ್ ಉಪಾಧ್ಯಕ್ಷರಾದ ರಾಘವೇಂದ್ರ,ಅರುಣಮ್ಮ,ಮಂಜುನಾಥರಾವ್, ಎಸ್.ಟಿ.ಮೊರ್ಚಾ ಅಧ್ಯಕ್ಷರಾದ ಶಾಂತಕುಮಾರ್ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಪಾರ್ವತಮ್ಮ, ಫ್ಯಾಕ್ಟರಿ ರಮೇಶ್, ಯುವಮೋರ್ಚಾ ಅಧ್ಯಕ್ಷರಾದ ಅಜಯ್ ಮಾರುತಿ ಭರತ್ ಮಣಿಕಂಠ ಸೆಟ್ ಮಧುನಾಗೇಶ್ ದ್ವಾರಕೀಶ್ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.