ಸಾರಾಂಶ
ಚಿಕ್ಕೋಡಿಯ ಬಸವಸರ್ಕಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಅವರ ನೇತೃತ್ವದಲ್ಲಿ ರಾಹುಲ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಪಟ್ಟಣದ ಬಸವ ಸರ್ಕಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಹುಲ್ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು. ಸಂಸತ್ ಭವನದ ಆವರಣದಲ್ಲಿ ರಾಹುಲ್ ಗಾಂಧೀಯ ನೇತೃತ್ವದಲ್ಲಿ ವಿರೋಧ ಪಕ್ಷದ ನಾಯಕರು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಗಳಾದ ಧನಕರ ಅವರನ್ನು ಅವಮಾನಿಸುವ ರೀತಿಯಲ್ಲಿ ಅಣಕು ಪ್ರದರ್ಶನ ನಡೆಸಿದನ್ನು ಖಂಡಿಸಿ ರಾಹುಲ್ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಸತೀಶ ಅಪ್ಪಾಜಿಗೊಳ, ಅಪ್ಪಾಸಾಹೇಬ ಚೌಗಲಾ, ಸಂಜೀವ ಪಾಟೀಲ, ಪ್ರಸಾದ ಪಚಂಡಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.