ಸಾರಾಂಶ
ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.ನಗರದಲ್ಲಿ ಶನಿವಾರ ಭಾರತೀಯ ಜನತಾ ಪಕ್ಷ ಬಾಗಲಕೋಟೆ ಬ್ಲಾಕ್ ನಿಂದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿರುವುದು, ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ, ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಕ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಿ ಕಿರುಕುಳ ನೀಡುವ ಮೂಲಕ ನಿರಂತರವಾಗಿ ದಬ್ಬಾಳಿಕೆ ನಡೆಸಲಾಗುತ್ತಿದೆ. ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಅವರ ಆತ್ಮಹತ್ಯೆ ವಿಚಾರವನ್ನು ರಾಜ್ಯ ಗೃಹ ಸಚಿವರು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಗೊಳ್ಳಬೇಕು, ಕಾಂಗ್ರೆಸ್ ಸರಕಾರದ ದುರಾಡಳಿತ, ಜನಸಾಮಾನ್ಯರನ್ನು ಶೋಷಿಸುವ ಪರಿ, ನಿರಂತರ ಬೆಲೆ ಏರಿಕೆ, ಜನರ ನೆಮ್ಮದಿಯ ಬದುಕಿಗೆ ಕೊಳ್ಳಿಯಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಜಿ.ಎನ್. ಪಾಟೀಲ, ಡಾ.ಎಂ.ಎಸ್. ದಡ್ಡೆನ್ನವರ, ನಗರಸಭೆ ಅಧ್ಯಕ್ಷೆ ಸವಿತಾ ಲಂಕೆನ್ನವರ, ಉಪಾಧ್ಯಕ್ಷೆ ಶೋಭಾ ರಾವ್, ಸದಸ್ಯೆ ಸರಸ್ವತಿ ಕುರುಬರ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಶಿವಾನಂದ ಟವಳಿ, ಮುತ್ತಣ್ಣ ಬೆಣ್ಣೂರ, ಸತ್ಯನಾರಾಯಣ ಹೆಮಾದ್ರಿ, ನಾಗರಾಜ ನಾರಾಯಣಕರ, ಯಲ್ಲಪ್ಪ ನಾರಾಯಣಿ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.ಇದಕ್ಕೂ ಮುಂಚೆ ಶಿವಾನಂದ ಜೀನ್ ನಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಪಾದಯಾತ್ರೆ ಮೂಲಕ ಬಸವೇಶ್ವರ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.