ನಿಗಮಕ್ಕೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

| Published : Dec 14 2024, 12:45 AM IST

ಸಾರಾಂಶ

ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದರೂ ಇದುವರೆಗೆ ಹಿಂದುಳಿದ ವರ್ಗಗಳ ನಿಗಮಗಳಿಗೆ ಸಮರ್ಪಕ ಅನುದಾನ ಬಿಡುಗಡೆ ಮಾಡಿಲ್ಲ.

ಹೊಸಪೇಟೆ: ರಾಜ್ಯದ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶುಕ್ರವಾರ ಮನವಿ ರವಾನಿಸಲಾಯಿತು.

ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದರೂ ಇದುವರೆಗೆ ಹಿಂದುಳಿದ ವರ್ಗಗಳ ನಿಗಮಗಳಿಗೆ ಸಮರ್ಪಕ ಅನುದಾನ ಬಿಡುಗಡೆ ಮಾಡಿಲ್ಲ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ₹1000 ಕೋಟಿ ಹೆಚ್ಚು ಅನುದಾನವನ್ನು ದೇವರಾಜ ಅರಸು, ಒಕ್ಕಲಿಗ, ಮರಾಠ, ವಿಶ್ವಕರ್ಮ, ವೀರಶೈವ ಲಿಂಗಾಯತ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಅಲೆಮಾರಿ ಅರೆ ಅಲೆಮಾರಿ, ಮಡಿವಾಳ ಮಾಚಿದೇಚ ಮತ್ತು ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಹಣ ಬಿಡುಗಡೆ ಮಾಡಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ₹1600 ಕೋಟಿ ಬಜೆಟ್‌ನಲ್ಲಿ ಘೋಷಣೆ ಮಾಡಿ ಕೇವಲ ₹369 ಕೋಟಿ ಮಾತ್ರ ವೆಚ್ಚ ಮಾಡಿದೆ. ಒಬಿಸಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ 6065 ಅರ್ಜಿಗಳು ಸಲ್ಲಿಕೆಯಾದರೂ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

2023ರಲ್ಲಿ ಬೊಮ್ಮಾಯಿ ಸರ್ಕಾರ ₹546 ಕೋಟಿ ಘೋಷಿಸಿತ್ತು. ಆದರೆ, ಇವರ ಅವಧಿಯಲ್ಲಿ ₹300 ಕೋಟಿ ಘೋಷಿಸಿ ಕೇವಲ ₹170 ಕೋಟಿ ನೀಡಿದ್ದಾರೆ. ಹಿಂದುಳಿದವರ ಪರವಾಗಿ ಇರುವ ಸರ್ಕಾರ ಎಂದುಕೊಳ್ಳುವ ಕಾಂಗ್ರೆಸ್ ಸರ್ಕಾರ ಸಾವಿರ ಕೋಟಿ ರು.ಯನ್ನಾದರೂ ಕೊಡಬೇಕಿತ್ತು. ಆದರೆ, ಘೋಷಿಸಿದಷ್ಟು ಹಣವನ್ನು ನೀಡಿಲ್ಲ. ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಬರಿದಾಗಿ ಹಿಂದುಳಿದ ಸಮುದಾಯಕ್ಕೆ ನಾಮ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಗಂಗಾ ಕಲ್ಯಾಣ ಯೋಜನೆಯಲ್ಲಿಯೂ ಒಂದೇ ಒಂದು ಬೋರ್ ವೆಲ್ ತೆಗೆಯಲು ಸಾಧ್ಯವಾಗಿಲ್ಲ. ಹಿಂದುಳಿದ ಕಲ್ಯಾಣ ಕಾರ್ಯಕ್ರಮ ಸ್ಥಗಿತಗೊಂಡಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲೆಮರೆಕಾಯಿಯಂತೆ ಇರುವ ಹಿಂದುಳಿದ ಸಮುದಾಯಗಳಾದ ಹೂಗಾರ, ಕಂಬಾರ, ಕುಂಬಾರ, ಗಾಣಿಗ, ಹಡಪದ, ಈಡಿಗ ಮತ್ತು ಮಾಳಿ ಸಮುದಾಯಗಳು ಕೂಡ ಆರ್ಥಿಕ, ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕು ಎಂದು ಈ ಹಿಂದಿನ ಬಿಜೆಪಿ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಸ್ಥಾಪನೆ ಮಾಡಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಈ ಸಣ್ಣ ಸಣ್ಣ ಸಮುದಾಯಗಳ ನಿಗಮಗಳಿಗೆ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಈ ನಿಮಗಳಿಗೂ ಹಣ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಮೋರ್ಚಾದ ಜಿಲ್ಲಾಧ್ಯಕ್ಷ ಈ.ಟಿ. ಲಿಂಗರಾಜ, ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಕೆ.ಎಸ್‌. ರಾಘವೇಂದ್ರ, ಜಿಲ್ಲಾ ವಕ್ತಾರ ಅಶೋಕ್ ಜೀರೆ, ಮುಖಂಡರಾದ ಶಂಕರ್‌ ಮೇಟಿ, ರೇವಣ ಸಿದ್ದಪ್ಪ, ನಾಗರಾಜ, ಚಂದ್ರಶೇಖರ, ಹೊನ್ನೂರಪ್ಪ, ಮಧುರಚನ್ನಶಾಸ್ತ್ರಿ,ಕೋಮಾರಪ್ಪ, ಮಲ್ಲಿಕಾರ್ಜುನ, ಗಂಗಾಧರ, ಹುಲುಗಪ್ಪ, ಉಮಾದೇವಿ, ಮಹಾದೇವಿ ಮತ್ತಿತರರಿದ್ದರು.

ಹೊಸಪೇಟೆಯಲ್ಲಿ ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ರವಾನಿಸಲಾಯಿತು.