ಸಾರಾಂಶ
ದೇಶದಲ್ಲಿ ರಾಹುಲ್ ಗಾಂಧಿ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕೈಯಲ್ಲಿ ಸಂವಿಧಾನ ಪುಸ್ತಕ ಹಿಡೀತಾರೆ ಆದರೆ ಮನಸ್ಸಿನಲ್ಲಿ ಸಂವಿಧಾನ, ಮೀಸಲಾತಿ ವಿರೋಧಿ ನಿಲುವು ಇಟ್ಟುಕೊಂಡಿದ್ದಾರೆ. ವಿದೇಶದಲ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಸಾಕ್ಷಿ. ಈ ಹೇಳಿಕೆಯನ್ನು ಆಲೂರು ಕಟ್ಟಾಯ ಮಂಡಲದ ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಖಂಡಿಸುತ್ತೇವೆ. ದೇಶವನ್ನು ವಿಭಜಿಸುವ ಶಕ್ತಿಗಳ ಜೊತೆ ನಿಂತು ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಆಕ್ರೋಶ ಹೊರಹಾಕಿ ಆಲೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
ಕನ್ನಡಪ್ರಭ ವಾರ್ತೆ ಆಲೂರು
ವಿದೇಶದಲ್ಲಿ ರಾಹುಲ್ ಗಾಂಧಿ ಅಪ್ರಬುದ್ಧವಾಗಿ ಮೀಸಲಾತಿ ರದ್ದುಪಡಿಸುವುದಾಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಆಲೂರು ತಾಲೂಕು ಬಿಜೆಪಿ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಆಲೂರು ಕಟ್ಟಾಯ ಮಂಡಲದ ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್, ವಿದೇಶದಲ್ಲಿ ರಾಹುಲ್ ಗಾಂಧಿ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕೈಯಲ್ಲಿ ಸಂವಿಧಾನ ಪುಸ್ತಕ ಹಿಡೀತಾರೆ ಆದರೆ ಮನಸ್ಸಿನಲ್ಲಿ ಸಂವಿಧಾನ, ಮೀಸಲಾತಿ ವಿರೋಧಿ ನಿಲುವು ಇಟ್ಟುಕೊಂಡಿದ್ದಾರೆ. ವಿದೇಶದಲ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಸಾಕ್ಷಿ. ಈ ಹೇಳಿಕೆಯನ್ನು ಆಲೂರು ಕಟ್ಟಾಯ ಮಂಡಲದ ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಖಂಡಿಸುತ್ತೇವೆ. ದೇಶವನ್ನು ವಿಭಜಿಸುವ ಶಕ್ತಿಗಳ ಜೊತೆ ನಿಂತು ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಬಾಲಲೋಚನ ಮಾತನಾಡಿ, ದೇಶದಲ್ಲಿ ಮೀಸಲಾತಿ ಎಂಬುದು ಎಸ್ಸಿ, ಎಸ್ಟಿಗಳ ಜನ್ಮ ಹಕ್ಕು. ಅದು ಕಾಂಗ್ರೆಸ್ ಪಕ್ಷದ ಭಿಕ್ಷೆಯಲ್ಲ. ದಲಿತರ ಕಲ್ಯಾಣಕ್ಕಾಗಿ, ಬದುಕಿಗೆ ರಕ್ಷಣೆ, ಜೀವನಕ್ಕೆ ಭದ್ರತೆ ನೀಡಲು ಮತ್ತು ಅವರೂ ಮನುಷ್ಯರ ರೀತಿ ಬದುಕಬೇಕೆಂಬ ಹಿನ್ನಲೆಯಲ್ಲಿ ಡಾ.ಅಂಬೇಡ್ಕರ್ ಮೀಸಲಾತಿಯನ್ನು ಸಂವಿಧಾನದಲ್ಲೇ ಬರೆದಿದ್ದಾರೆ.ರಾಹುಲ್ ಗಾಂಧಿ ಇಡೀ ದೇಶವನ್ನು ಅಪಮಾನ ಮಾಡುತ್ತಿದ್ದಾರೆ. ದೇಶದ ಪ್ರತಿಷ್ಠೆಗೆ ಮಸಿ ಬಳಿಯುತ್ತಿದ್ದಾರೆ. ಅವರು ಏನೇ ಹೇಳಲಿ, ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕೆ ಬಿಜೆಪಿ ಬದ್ಧ ರಾಹುಲ್ ಗಾಂಧಿ ಅಪ್ರಬುದ್ಧ ಹೇಳಿಕೆ ಖಂಡಿಸುತ್ತೇನೆ ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ ಮಾಜಿ ಅಧ್ಯಕ್ಷ ನಾಗರಾಜ ಹುಲ್ಲಹಳ್ಳಿ, ಉಪಾಧ್ಯಕ್ಷ ಬಸವರಾಜ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಖಜಾಂಚಿ ಹೆಮಂತ್, ಭೂತ್ ಅಧ್ಯಕ್ಷ ಕರಿಯಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ನಂಜುಂಡಪ್ಪ, ಗಣೇಶ್, ಮಾವನೂರು ಮೋಹನ್, ಮುಖಂಡರಾದ ಅಜಿತ್, ಲೊಕೇಶ್, ಕಿರಣ್, ನಟರಾಜ್, ಜೆಸಿಬಿ ರವಿ, ನವೀನ್ ದಡದಹಳ್ಳಿ, ಬಿ ಎಸ್ ಎನ್ ಎಲ್ ಮಂಜಣ್ಣ, ದೇವರಾಜ್, ಸೇರಿದಂತೆ ಮುಂತಾದವರು ಹಾಜರಿದ್ದರು.