ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಾವಗಲ್‌ನಲ್ಲಿ ಬಿಜೆಪಿ ಪ್ರತಿಭಟನೆ

| Published : Oct 02 2024, 01:04 AM IST

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಾವಗಲ್‌ನಲ್ಲಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ತೀರ್ಪು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾ ಮಾಡಲಾಗಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹೋಬಳಿ ಬಿಜೆಪಿ ವತಿಯಿಂದ ಜಾವ್‌ಗಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಜಾವಗಲ್‌

ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹೋಬಳಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಸ್ ನಿಲ್ದಾಣದ ಎದುರು ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು. ಗೋ ಬ್ಯಾಕ್ ಕಾಂಗ್ರೆಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಬೇಲೂರು ಮಂಡಲದ ಅಧ್ಯಕ್ಷ ಸಂಜಯ ಕೌರಿ, ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ತೀರ್ಪು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾ ಮಾಡಲಾಗಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮುಖ್ಯಮಂತ್ರಿಯಂತಹ ಉನ್ನತ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ. ರಾಜೀನಾಮೆ ಕೊಟ್ಟು ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು. ಹೈಕೋರ್ಟ್‌ ತನಿಖೆಗೆ ಆದೇಶ ನೀಡಿದ್ದರೂ, ಇದುವರೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡದಿರುವುದು ಖಂಡನೀಯ. ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. .

ಬೇಲೂರು ಮಂಡಲದ ಪ್ರಧಾನ ಕಾರ್ಯದರ್ಶಿ ಮಸಾಲೆ ರಮೇಶ್, ಅರಕೆರೆ ಗ್ರಾಮ ಪಂಚಾಯಿತಿ ಸದಸ್ಯ ಮಾರ್ಗೊಂಡನಹಳ್ಳಿ ನವೀನ್, ಬಿಜೆಪಿ ಮುಖಂಡರಾದ ರವಿಶಂಕರ್‌, ಕಲ್ಯಾಡಿ ಬಸವರಾಜು, ಕುಮಾರಸ್ವಾಮಿ ಹಂದ್ರಾಳು ಸಂಪತ್, ಯುವ ಮುಖಂಡ ಪವನ್ ಮತ್ತಿತರರು ಇದ್ದರು.