ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

| Published : Apr 23 2024, 12:47 AM IST

ಸಾರಾಂಶ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ, ಸಿಎಂ ಮತ್ತು ಗೃಹಸಚಿವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕೆಲಕಾಲ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಉಸ್ತುವಾರಿ ಫಣೀಶ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಇದೊಂದು ಅತ್ಯಂತ ಅಮಾನುಷ ಘಟನೆಯಾಗಿದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ಖಂಡನೀಯ ರಾಜ್ಯದ ಸಿಎಂಆಗಿ ಸಿದ್ದರಾಮಯ್ಯ ಲಘುವಾಗಿ ವೈಯಕ್ತಿಕ ವಿಚಾರವಾಗಿ ನಡೆದಿರುವುದು ಎಂದರೆ, ಗೃಹ ಸಚಿವ ಡಾ. ಪರಮೇಶ್ವರ್ ಲವ್‌ಗಾಗಿ ನಡೆದಿರುವುದು ಎಂದಿರುವುದು ಈ ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತದೆ. ಗುಪ್ತಚರ ಮಾಹಿತಿ ತೆಗೆದುಕೊಂಡು ಜವಾಬ್ದಾರಿಯುತವಾಗಿ ಹೇಳಿಕೆ ಕೊಡುವುದನ್ನು ಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ, ನೇಹಾ ಹಿರೇಮಠ್‌ರನ್ನು ಹಾಡುಹಗಲೇ ಕಾಲೇಜ್ ಕ್ಯಾಂಪಸ್‌ನಲ್ಲಿ ಬರ್ಬರವಾಗಿ ಕೊಲೆ ಮಾಡಿರುವುದು ನಾಗರಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯವಾಗಿದೆ ಎಂದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ. ಹಾಗೂ ಗೃಹ ಸಚಿವರು ನೀಡುತ್ತಿರುವ ಹೇಳಿಕೆಗಳನ್ನು ಗಮನಿಸಿದರೆ ಇದರಲ್ಲಿ ದಾರಿ ತಪ್ಪಿಸುವ ಸಂಶಯ ವ್ಯಕ್ತವಾಗುತ್ತಿದೆ ಕಾನೂನು ಚೌಕಟ್ಟಿನಲ್ಲಿ ಸೂಕ್ತ ತನಿಖೆ ಕೈಗೊಂಡು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ, ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸದಿದ್ದರೆ ಏ. 26ರಂದು ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.ಪ್ರತಿಭಟನೆಯಲ್ಲಿ ಮುಖಂಡರಾದ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ನೂರೊಂದುಶೆಟ್ಡಿ, ನಾಗಶ್ರೀ ಪ್ರತಾಪ್, ಹನುಮಂತಶೆಟ್ಟಿ, ಎಂ.ಎಸ್. ಚಂದ್ರಶೇಖರ್, ಬಾಲಸುಬ್ರಹ್ಮಣ್ಯಂ, ಪ್ರಣಯ್, ಕುಮಾರ್, ನಟೇಶ್, ಕಮಲಮ್ಮ, ಪದ್ಮ, ರತ್ನಮ್ಮ, ಮಮತಾ, ಗಾಯಿತ್ರಿ, ವಿರಾಟ್ ಶೀವು, ಬಂಗಾರು, ಶಿವರಾಜ್, ಸೂರ್ಯಕುಮಾರ್, ಆನಂದ್ ಭಗೀರಥ ಇತರರು ಭಾಗವಹಿಸಿದ್ದರು.22ಸಿಎಚ್‌ಎನ್2

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.