ಸಾರಾಂಶ
ಬಿಹಾರ ಚುನಾವಣೆ ಮುಗಿದು ಅಲ್ಲಿ ನೂತನ ಎನ್‌ಡಿಎ ಸರ್ಕಾರ ಅಧಿಕಾರದ ಗದ್ದುಗೆ ಏರಿದ ದಿನವೇ ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಬಂಡಾಯ ಮುಖಂಡರ ಬಣ ಕ್ರಿಯಾಶೀಲವಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಹಾರ ಚುನಾವಣೆ ಮುಗಿದು ಅಲ್ಲಿ ನೂತನ ಎನ್‌ಡಿಎ ಸರ್ಕಾರ ಅಧಿಕಾರದ ಗದ್ದುಗೆ ಏರಿದ ದಿನವೇ ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಬಂಡಾಯ ಮುಖಂಡರ ಬಣ ಕ್ರಿಯಾಶೀಲವಾಗಿದೆ.ಬಹುದಿನಗಳ ನಂತರ ಗುರುವಾರ ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಿದ ಮುಖಂಡರು ತಮ್ಮ ಹಳೆಯ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವರಿಷ್ಠರ ಭೇಟಿಗಾಗಿ ಶೀಘ್ರ ದೆಹಲಿಗೆ ತೆರಳುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.
ಇದೇ ವೇಳೆಗೆ ದಾವಣಗೆರೆ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗೆ ಸೋಲಿಗೆ ಕಾರಣರಾದ ಮುಖಂಡರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಹಾಲಿ ಜಿಲ್ಲಾಧ್ಯಕ್ಷರನ್ನು ಬದಲಾಯಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್ ನೇತೃತ್ವದಲ್ಲಿ ವರಿಷ್ಠರನ್ನು ಕಂಡು ಒತ್ತಾಯವನ್ನೂ ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.ಪಕ್ಷದ ಹಾಲಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಅವರು ಕಳೆದ ಕೆಲ ದಿನಗಳಿಂದ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಬಂಡಾಯ ಮುಖಂಡರು ಸಭೆ ನಡೆಸುವ ಮೂಲಕ ತಮ್ಮ ಬೇಡಿಕೆಯಿಂದ ಹಿಂದೆ ಸರಿದಿಲ್ಲ ಎಂಬ ಸಂದೇಶ ರವಾನಿಸುವ ಪ್ರಯತ್ನ ನಡೆಸಿದರು.
ಸಭೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ, ಶಾಸಕ ಬಿ.ಪಿ.ಹರೀಶ, ಮಾಜಿ ಶಾಸಕ ಎಚ್.ಪಿ.ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))