ಬಿಜೆಪಿ: ರಾಜ್ಯಕ್ಕೆ ಮೋದಿ ಸೇರಿ 40 ಸ್ಟಾರ್‌ ಪ್ರಚಾರಕರು

| Published : Mar 31 2024, 02:05 AM IST / Updated: Mar 31 2024, 07:31 AM IST

Narendra Modi
ಬಿಜೆಪಿ: ರಾಜ್ಯಕ್ಕೆ ಮೋದಿ ಸೇರಿ 40 ಸ್ಟಾರ್‌ ಪ್ರಚಾರಕರು
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಸ್ಟಾರ್‌ ಪ್ರಚಾರಕರ ಹೆಸರನ್ನು ಪ್ರಕಟಿಸಿದ್ದು, ಕೇಂದ್ರ ಚುನಾವಣಾ ಆಯೋಗವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿ 40 ಮಂದಿಗೆ ಸ್ಟಾರ್‌ ಪ್ರಚಾರಕರಾಗಿ ಅನುಮತಿ ನೀಡಿದೆ.

 ಬೆಂಗಳೂರು :  ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಸ್ಟಾರ್‌ ಪ್ರಚಾರಕರ ಹೆಸರನ್ನು ಪ್ರಕಟಿಸಿದ್ದು, ಕೇಂದ್ರ ಚುನಾವಣಾ ಆಯೋಗವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿ 40 ಮಂದಿಗೆ ಸ್ಟಾರ್‌ ಪ್ರಚಾರಕರಾಗಿ ಅನುಮತಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್‌ಸಿಂಗ್‌, ಅಮಿತ್‌ ಶಾ, ನಿತಿನ್‌ ಗಡ್ಕರಿ, ಎಸ್‌.ಜೈಶಂಕರ್‌, ನಿರ್ಮಲಾ ಸೀತಾರಾಮನ್‌, ಪ್ರಹ್ಲಾದ್‌ ಜೋಶಿ, ಸೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‌ ದಾಸ್‌ ಅವರು ಸ್ಟಾರ್‌ ಪ್ರಚಾರಕರಾಗಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ, ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಪಕ್ಷದ ಮುಖಂಡ ಸುಧಾಕರ್‌ ರೆಡ್ಡಿ, ಸಂಸದ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಪಕ್ಷದ ಮುಖಂಡರಾದ ನಳಿನ್‌ ಕುಮಾರ್‌ ಕಟೀಲ್‌, ಸಿ.ಟಿ.ರವಿ, ಗೋವಿಂದ ಕಾರಜೋಳ, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ.ಸುನೀಲ್‌ ಕುಮಾರ್‌, ಜಿ.ವಿ. ರಾಜೇಶ್‌, ಪಿ.ರಾಜೀವ್‌, ಜೆ.ಪ್ರೀತಂಗೌಡ, ಬಸವಗೌಡ ಪಾಟೀಲ್‌ ಯತ್ನಾಳ್‌, ಬೈರತಿ ಬಸವರಾಜು, ಪ್ರಮೋದ್‌ ಮಧ್ವರಾಜ್‌, ಛಲವಾದಿ ನಾರಾಯಣಸ್ವಾಮಿ, ಪ್ರತಾಪ್‌ ಸಿಂಹ ಮತ್ತು ಎನ್‌.ಮಹೇಶ್‌ ಅವರಿಗೆ ಸ್ಟಾರ್‌ ಪ್ರಚಾರಕರಾಗಿ ಅವಕಾಶ ನೀಡಲಾಗಿದೆ.