ಕೆರೆ ನೀರಿಗಾಗಿ ಬಿಜೆಪಿ ಕಾಲ್ನಡಿಗೆ ಜಾಥಾ ಇಂದು

| Published : Nov 05 2025, 01:30 AM IST

ಸಾರಾಂಶ

ತಾಲೂಕಿನ ಕೆರೆ ನೀರಿಗಾಗಿ ಕಾಲ್ನಡಿಗೆ ಜಾಥಾ ಹಾಗು ತಾಲೂಕು ಕಚೇರಿಗೆ ಮುತ್ತಿಗೆ ಹಾಕಲು ಬರುವ ನ.೫ ರಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ತಾಲೂಕಿನ ಕೆರೆ ನೀರಿಗಾಗಿ ಕಾಲ್ನಡಿಗೆ ಜಾಥಾ ಹಾಗು ತಾಲೂಕು ಕಚೇರಿಗೆ ಮುತ್ತಿಗೆ ಹಾಕಲು ಬರುವ ನ.೫ ರಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಲಿದ್ದಾರೆ.

ಕಾಲ್ನಡಿಗೆ ಜಾಥಾದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್‌ ಭಾಗವಹಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೈಸೂರು-ಕೊಡಗು ಮಾಜಿ ಸಂಸದ ಪ್ರತಾಪ್‌ ಸಿಂಹ, ಮಾಜಿ ಎನ್.ಮಹೇಶ್‌, ಮಾಜಿ ಶಾಸಕ ಎಸ್.ಬಾಲರಾಜು, ಮಾಜಿ ಎಂಎಲ್‌ಸಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಇಬ್ಬಂದಿ ನೀತಿ ಹಾಗೂ ಸ್ಥಳೀಯ ಶಾಸಕರ ರೈತ ವಿರೋಧಿ ನೀತಿ ಖಂಡಿಸಿ ನ.5 ರಂದು ತಾಲೂಕು ಕಚೇರಿಗೆ ಸಾವಿರಾರು ಮಂದಿ ಮುತ್ತಿಗೆ ಹಾಗೂ ಕಾಲ್ನಡಿಗೆ ಜಾಥಾಕ್ಕೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಆಗಮಿಸಲಿದ್ದಾರೆ.

ರೈತಸಂಘದ ಅಹೋ ರಾತ್ರಿ 21 ದಿನಕ್ಕೆ: ಗುಂಡ್ಲುಪೇಟೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಕೆ.ಎಸ್.ಪುಟ್ಟಣ್ಣಯ್ಯ ಬಣದ ರೈತಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋ ರಾತ್ರಿ ಧರಣಿ 21 ದಿನಕ್ಕೆ ಕಾಲಿಟ್ಟಿದೆ.

ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ಕನ್ನಡಪ್ರಭದೊಂದಿಗೆ ಮಾತನಾಡಿ ಅಹೋ ರಾತ್ರಿ ಧರಣಿ ಕಳೆದ 21 ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ತನಕ ಅಹೋ ರಾತ್ರಿ ಧರಣಿ ನಿಲ್ಲಿಸುವುದಿಲ್ಲ ಎಂದು ಧರಣಿ ಆರಂಭದ ದಿನವೇ ಘೋಷಣೆ ಮಾಡಿದ್ದೇವೆ. ತಾಲೂಕಿನ ಕೆರೆಗಳಿಗೆ ನೀರು ಬಂದು ಬೀಳುವ ತನಕ ಧರಣಿ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದರು.

ಇಂದಿನ ಧರಣಿಯಲ್ಲಿ ತಾಲೂಕು ರೈತಸಂಘದ ಅಧ್ಯಕ್ಷ ಹಂಗಳ ದಿಲೀಪ್‌, ಮುಖಂಡರಾದ ಮಾಧು, ನಾಗರಾಜಪ್ಪ, ಮಹೇಶ್‌, ಸುರೇಶ್‌, ಲೋಕೇಶ್‌ ಸೇರಿದಂತೆ ಹಲವರಿದ್ದರು.