ಬಿಜೆಪಿ ಆಂತರಿಕ ಕಚ್ಚಾಟ, ಟಿಕೆಟ್ಗೊಂದಲ ಕಾಂಗ್ರೆಸ್‌ಗೆ ವರ: ಬೇಳೂರು

| Published : Apr 22 2024, 02:05 AM IST

ಬಿಜೆಪಿ ಆಂತರಿಕ ಕಚ್ಚಾಟ, ಟಿಕೆಟ್ಗೊಂದಲ ಕಾಂಗ್ರೆಸ್‌ಗೆ ವರ: ಬೇಳೂರು
Share this Article
  • FB
  • TW
  • Linkdin
  • Email

ಸಾರಾಂಶ

ಸಾಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಹಬ್ಬ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿ ಪಕ್ಷದ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದರು.

ಕನ್ನಡಪ್ರಭ ವಾರ್ತೆ ಸಾಗರ ಬಿಜೆಪಿಯ ಆಂತರಿಕ ಕಚ್ಚಾಟ ಕಾಂಗ್ರೆಸ್ಸಿಗೆ ವರವಾಗಲಿದ್ದು, ರಾಜ್ಯದಲ್ಲಿ ಕನಿಷ್ಟ ೧೬ರಿಂದ ೧೭ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಗಾಂಧಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಗ್ಯಾರಂಟಿ ಹಬ್ಬವನ್ನು ಉದ್ಘಾಟಿಸಿ, ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿ ದ ಅವರು, ಆರಂಭದಲ್ಲಿ ೭ ರಿಂದ ೮ ಕ್ಷೇತ್ರಗಳಲ್ಲಿ ಗೆಲ್ಲಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಬಿಜೆಪಿ ಆಂತರಿಕ ಕಚ್ಚಾಟ, ಟಿಕೆಟ್ ಗೊಂದಲ ಇನ್ನಿತರ ಕಾರಣಗಳು ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗಳಿಸಲು ಸಾಧ್ಯವಾಗಲಿದೆ ಎಂದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಡಿಯೂರಪ್ಪ ಮತ್ತವರ ಮಕ್ಕಳಿಗೆ ಅವರದ್ದೇ ಪಕ್ಷದಲ್ಲಿ ಶತೃಗಳಿದ್ದಾರೆ. ಒಂದು ಕಡೆ ಯತ್ನಾಳ್ ಬೈಯುತ್ತಿದ್ದಾರೆ, ಇನ್ನೊಂದು ಕಡೆ ಈಶ್ವರಪ್ಪ ಅಪ್ಪಮಕ್ಕಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವುದು ನಮ್ಮ ಅಭ್ಯರ್ಥಿಗೆ ಲಾಭವಾಗಲಿದೆ. ಜೊತೆಗೆ ಎಸ್.ಬಂಗಾರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೀಡಿದ ಕೊಡುಗೆ ಗೀತಾ ಅವರು ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಲು ನೆರವಾಗಲಿದೆ ಎಂದು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮುನ್ನ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಘೋಷಣೆ ಮಾಡಿದಾಗ ಸಾಕಷ್ಟು ಜನರು ಇದು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದರು. ಸರ್ಕಾರ ಬಂದಾಗ ಬಿಜೆಪಿಯವರು ಗ್ಯಾರಂಟಿ ಅನುಷ್ಠಾನ ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಎಲ್ಲರ ನಿರೀಕ್ಷೆ ಹುಸಿ ಮಾಡಿ ಐದೂ ಗ್ಯಾರಂಟಿಯನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರ ನೆರವಿಗೆ ಕಾಂಗ್ರೆಸ್ ಸರ್ಕಾರ ನಿಂತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ೨೫ ಗ್ಯಾರಂಟಿ ಘೋಷಣೆ ಮಾಡಿದೆ. ನಮ್ಮ ಮುಖಂಡರು, ಕಾರ್ಯಕರ್ತರು, ಮನೆಮನೆಗೆ ತೆರಳಿ ಪಕ್ಷದ ಗ್ಯಾರಂಟಿ ಕಾರ್ಡ್ ನೀಡುವ ಮೂಲಕ ನಮ್ಮ ಅಭ್ಯರ್ಥಿ ಗೀತಾ ಅವರನ್ನು ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಪ್ರಫುಲ್ಲಾ ಮಧುಕರ್, ಕಲಸೆ ಚಂದ್ರಪ್ಪ, ಬಿ.ಆರ್.ಜಯಂತ್, ಎಚ್.ಎಂ.ರವಿಕುಮಾರ್, ಅನಿತಾ ಕುಮಾರಿ, ಮಕ್ಬೂಲ್ ಅಹ್ಮದ್, ಎನ್.ಉಷಾ, ನಂದಾ ಗೊಜನೂರು, ಗಣಪತಿ ಮಂಡಗಳಲೆ, ಮಹಾಬಲ ಕೌತಿ, ವಿ.ಶಂಕರ್, ಮೈಕಲ್ ಡಿಸೋಜ ಇನ್ನಿತರರು ಹಾಜರಿದ್ದರು.