ಬಿಜೆಪಿ ಶಕ್ತಿ ಮತ್ತಷ್ಟು ಹೆಚ್ಚಿದೆ: ಗಣೇಶ್ ಪ್ರಸಾದ್

| Published : Jun 09 2024, 01:36 AM IST

ಬಿಜೆಪಿ ಶಕ್ತಿ ಮತ್ತಷ್ಟು ಹೆಚ್ಚಿದೆ: ಗಣೇಶ್ ಪ್ರಸಾದ್
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ಟಣದ ಪ್ರದೇಶದಲ್ಲಿ ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ೬ ಸಾವಿರಕ್ಕೂ ಹೆಚ್ಚು ಮತ ಪಡೆದಿದೆ. ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ದಾಖಲೆ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿಸಿದ್ದಾರೆ. ಸಾಗರ ಕ್ಷೇತ್ರದ ಮತದಾರರು ಬಿಜೆಪಿಯತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ. ನಗರಸಭೆ ಆಡಳಿತ ಶಾಸಕರ ಮರ್ಜಿಯಂತೆ ನಡೆಯುತ್ತಿದ್ದು, ಅಧಿಕಾರಿಗಳ ದಬ್ಬಾಳಿಕೆ ಜಾಸ್ತಿಯಾಗಿದೆ.

ಕನ್ನಡಪ್ರಭವಾರ್ತೆ ಸಾಗರ

ವಿಧಾನ ಪರಿಷತ್‌ಗೆ ನಡೆದ ಎರಡೂ ಕ್ಷೇತ್ರಗಳಲ್ಲೂ ಪ್ರಬುದ್ಧ ಮತದಾರರು ಬಿಜೆಪಿ ಬೆಂಬಲಿಸಿದ್ದು ಅತ್ಯಂತ ಸಂತೋಷ ತಂದಿದೆ. ಕ್ಷೇತ್ರದಲ್ಲಿ ಪ್ರಬುದ್ಧ ಮತದಾರರು ಬಿಜೆಪಿ ಪರ ಇದ್ದಾರೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಹೇಳಿದರು.

ಪಟ್ಟಣದ ಸಾಗರ ಹೋಟೆಲ್ ವೃತ್ತದಲ್ಲಿ ಶುಕ್ರವಾರ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಡಾ.ಧನಂಜನ ಸರ್ಜಿ ಹಾಗೂ ನೈಋತ್ಯ ಶಿಕ್ಷಕ ಕ್ಷೇತ್ರದಲ್ಲಿ ಭೋಜೇಗೌಡ ಜಯಗಳಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಮಾತನಾಡಿ, ಲೋಕಸಭಾ ಚುನಾವಣೆ ಗೆಲುವಿನ ನಂತರ ಬಿಜೆಪಿ ಶಕ್ತಿ ಇನ್ನಷ್ಟು ಹೆಚ್ಚಿದೆ ಎಂದರು.

ಪಟ್ಟಣದ ಪ್ರದೇಶದಲ್ಲಿ ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ೬ ಸಾವಿರಕ್ಕೂ ಹೆಚ್ಚು ಮತ ಪಡೆದಿದೆ. ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ದಾಖಲೆ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿಸಿದ್ದಾರೆ. ಸಾಗರ ಕ್ಷೇತ್ರದ ಮತದಾರರು ಬಿಜೆಪಿಯತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ. ನಗರಸಭೆ ಆಡಳಿತ ಶಾಸಕರ ಮರ್ಜಿಯಂತೆ ನಡೆಯುತ್ತಿದ್ದು, ಅಧಿಕಾರಿಗಳ ದಬ್ಬಾಳಿಕೆ ಜಾಸ್ತಿಯಾಗಿದೆ. ಬಿಜೆಪಿ ಮುಂದಿನ ದಿನಗಳಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ಹೋರಾಟ ರೂಪಿಸುತ್ತದೆ ಎಂದು ಹೇಳಿದರು.

ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರೇಮಾ ಕಿರಣ್ ಸಿಂಗ್ ಮಾತನಾಡಿ, ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ತೀವೃ ಮುಖಭಂಗವಾಗಿದೆ. ಪ್ರಜ್ಞಾವಂತ ಮತದಾರರು ಬಿಜೆಪಿ ಪರವಾಗಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಬೆಳೆಸುತ್ತಾರೆ ಎನ್ನುವುದಕ್ಕೆ ಚುನಾವಣೆ ಫಲಿತಾಂಶಗಳೇ ಸಾಕ್ಷಿ ಎಂದು ಹೇಳಿದರು.

ಯುವಮೋರ್ಚಾ ಅಧ್ಯಕ್ಷ ಪರಶುರಾಮ್ ಮಾತನಾಡಿದರು. ಡಾ.ರಾಜನಂದಿನಿ ಕಾಗೋಡು, ಪ್ರಶಾಂತ್ ಕೆ.ಎಸ್., ಮಧುರಾ ಶಿವಾನಂದ್, ಆರ್.ಶ್ರೀನಿವಾಸ್ ಮೇಸ್ತ್ರಿ, ಜಿ.ಕೆ.ಭೈರಪ್ಪ, ಸಂತೋಷ್ ಶೇಟ್, ರಾಮು ಇನ್ನಿತರರಿದ್ದರು.