ಪದವೀಧರ, ಶಿಕ್ಷಕರ ಸಮಸ್ಯೆಗಳಿಗೆ ಬಿಜೆಪಿ ಸ್ಪಂದನೆ: ಎಂಎಲ್‌ಸಿ ಭಾರತಿ ಶೆಟ್ಟಿ

| Published : May 29 2024, 12:46 AM IST

ಸಾರಾಂಶ

ಡಾ.ಧನಂಜಯ ಸರ್ಜಿ ಕೋವಿಡ್ ಸಂದರ್ಭದಲ್ಲಿ ಅನೇಕ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆ ಜೊತೆಯಲ್ಲಿ ವೈದ್ಯಕೀಯ ಸೇವೆಯಲ್ಲಿರುವ ಡಾ.ಸರ್ಜಿ ಸೂಕ್ತ ಅಭ್ಯರ್ಥಿಯಾಗಿದ್ದು, ಈ ನಿಟ್ಟಿನಲ್ಲಿ ಪದವೀಧರರು ಅವರ ಬೆಂಬಲಿಸಬೇಕು. ಸಂಘ-ಪರಿವಾರದ ಹಿನ್ನೆಲೆಯಿಂದ ಬಂದ ಸರ್ಜಿ ಅನೇಕ ಜವಾಬ್ದಾರಿಗಳ ನಿರ್ವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣದ ಅವಧಿಯಲ್ಲೂ ಸಂಘದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸೊರಬ

ರಾಜ್ಯದಲ್ಲಿ ಪದವೀಧರ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ಬಿಜೆಪಿ ಮಾತ್ರ. ಈ ನಿಟ್ಟಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರ ಬೆಂಬಲಿಸಲು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮನವಿ ಮಾಡಿದರು.

ಪಟ್ಟಣದ ವಕೀಲರ ಭವನದ ಮುಂಭಾಗದಲ್ಲಿ ಮಂಗಳವಾರ ವಿಧಾನ ಪರಿಷತ್ ಅಭ್ಯರ್ಥಿಗಳ ಪರ ಮತಯಾಚಿಸಿ ಮಾತನಾಡಿ ಡಾ.ಧನಂಜಯ ಸರ್ಜಿ ಕೋವಿಡ್ ಸಂದರ್ಭದಲ್ಲಿ ಅನೇಕ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆ ಜೊತೆಯಲ್ಲಿ ವೈದ್ಯಕೀಯ ಸೇವೆಯಲ್ಲಿರುವ ಡಾ.ಸರ್ಜಿ ಸೂಕ್ತ ಅಭ್ಯರ್ಥಿಯಾಗಿದ್ದು, ಈ ನಿಟ್ಟಿನಲ್ಲಿ ಪದವೀಧರರು ಅವರ ಬೆಂಬಲಿಸಬೇಕು. ಸಂಘ-ಪರಿವಾರದ ಹಿನ್ನೆಲೆಯಿಂದ ಬಂದ ಸರ್ಜಿ ಅನೇಕ ಜವಾಬ್ದಾರಿಗಳ ನಿರ್ವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣದ ಅವಧಿಯಲ್ಲೂ ಸಂಘದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಿದ್ದಾರೆ ಎಂದರು. ಅತ್ಯಧಿಕ ಬಹುಮತದಿಂದ ಬಿವೈಆರ್‌ ಜಯ:

ಕಳೆದ ೧೦ ವರ್ಷದಿಂದ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು ವಿಶ್ವ ಗುರುವಾಗಿಸುವ ನಿಟ್ಟಿನಲ್ಲಿ ಶ್ರಮ ವಹಿಸುತ್ತಿದ್ದಾರೆ. ಇದೇ ಹಾದಿಯಲ್ಲಿ ಡಾ.ಧನಂಜಯ ಸರ್ಜಿ ಮತ್ತು ಭೋಜೇಗೌಡರನ್ನು ಬೆಂಬಲಿಸಬೇಕಿದೆ. ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳ ಸಮೀಪದಲ್ಲಿ ಕಂಡಿರುವ ಅಭ್ಯರ್ಥಿಗಳನ್ನೇ ಪಕ್ಷ ಕಣಕ್ಕೆ ಇಳಿಸಿದೆ. ಲೋಕಸಭಾ ಚುನಾವಣೆಯಲ್ಲಿಯೂ ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರ ಅತ್ಯಧಿಕ ಬಹುಮತದಿಂದ ಜಯಗಳಿಸಲಿದ್ದಾರೆ. ಪ್ರಜ್ಞಾವಂತ ಮತದಾರರು ಬಿಜೆಪಿ ಅಭ್ಯರ್ಥಿಗಳ ಬೆಂಬಲಿಸುವಂತೆ ಮನವಿ ಮಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮಧುರಾಯ್ ಜಿ. ಶೇಟ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಹಿರಿಯರಾದ ಎಚ್.ಎಸ್. ಮಂಜಪ್ಪ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಆಶೀಕ್ ನಾಗಪ್ಪ, ಟೌನ್ ಅಧ್ಯಕ್ಷ ಅಶೋಕ್ ಶೇಟ್, ವಕೀಲರ ಸಂಘದ ಅಧ್ಯಕ್ಷ ಸಿ.ವೈ. ಅಶೋಕ್ ಯಂಕೇನ್, ಹಿರಿಯ ವಕೀಲರಾದ ನಾಗಪ್ಪ, ಎಂ.ಆರ್.ಪಾಟೀಲ್, ಡಾಕಪ್ಪ ಹೆಸರಿ, ಚಂದ್ರಶೇಖರ್ ಬಾರಂಗಿ, ಗುರುಸ್ವಾಮಿ, ಡಿ. ಶಿವಯೋಗಿ, ರಂಗನಾಥ ಚಕ್ರಪಾಣಿ, ಶಾಂಭವಿ, ಸಾಜೀಯಾ, ರಾಜಕುಮಾರ್, ಪ್ರಶಾಂತ್ ಸೇರಿ ಇತರರಿದ್ದರು.