ಬಿಜೆಪಿ ಜಿಲ್ಲಾಧ್ಯಕ್ಷರ ತವರಲ್ಲಿ ಬಿಜೆಪಿಗೆ ಹಿನ್ನಡೆ!

| Published : Jun 05 2024, 12:30 AM IST

ಬಿಜೆಪಿ ಜಿಲ್ಲಾಧ್ಯಕ್ಷರ ತವರಲ್ಲಿ ಬಿಜೆಪಿಗೆ ಹಿನ್ನಡೆ!
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ರನ್ನು ಲೋಕಸಭಾ ಚುನಾವಣೆಗೂ ಮುನ್ನ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಬಿಜೆಪಿ ಜಿಲ್ಲಾಧ್ಯಕ್ಷ ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ ತವರು ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆ ಮೀಸಲು ಕ್ಷೇತ್ರದ ಅಭ್ಯರ್ಥಿ ಎಸ್.ಬಾಲರಾಜ್‌ಗೆ ಹೆಚ್ಚಿನ ಲೀಡ್‌ ಕೊಡಿಸಲು ಆಗದೆ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್‌ಗೆ 76, 176 ಮತಗಳನ್ನು ಮಾತ್ರ ಕೊಡಿಸುವಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ ಕುಮಾರ್‌ ಶಕ್ತರಾಗಿದ್ದಾರೆ. ಆದರೆ ಕಾಂಗ್ರೆಸ್‌ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಕ್ಷೇತ್ರದಲ್ಲಿ ಮತ್ತೆ ಹಿಡಿತ ಸಾಧಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ಗೆ 94,214 ಮತಗಳನ್ನು ಕೊಡಿಸಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ 18, 038 ಲೀಡ್‌ ಕೊಡಿಸಿದ್ದಾರೆ ಎಂದರು. ಕಳೆದ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರು ಬಿಜೆಪಿ ಪರಾಜಿತ ಅಭ್ಯರ್ಥಿ ಸಿ.ಎಸ್.ನಿರಂಜನ್‌ ಕುಮಾರ್‌ ವಿರುದ್ಧ 36;775 ಮತಗಳ ಅಂತರದಿಂದ ಸೋಲಿಸಿದ್ದಾರೆ.

ನೂತನ ಜಿಲ್ಲಾಧ್ಯಕ್ಷ: ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ರನ್ನು ಲೋಕಸಭಾ ಚುನಾವಣೆಗೂ ಮುನ್ನ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ನೂತನ ಅಧ್ಯಕ್ಷರಾದ ಬಳಿಕ ತುಸು ಉತ್ಸಾಹದಿಂದಲೇ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಸಿ.ಎಸ್.ನಿರಂಜನ್‌ ಕುಮಾರ್ ಜಿಲ್ಲಾಧ್ಯಕ್ಷರಾದ ಬಳಿಕ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಉತ್ಸಾಹ, ಹುಮ್ಮಸ್ಸಿನಿಂದಲೇ ಚುನಾವಣೆ ಎದುರಿಸಿ ಕಾಂಗ್ರೆಸ್‌ಗಿಂತ ಹೆಚ್ಚಿನ ಲೀಡ್‌ ಪಡೆಯಲು ಪ್ರಯತ್ನಿಸಿದ್ದರು. ನಿರಂಜನ್‌ ಕುಮಾರ್‌ ಸಾರಥ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಗುಂಡ್ಲುಪೇಟೆ ಕ್ಷೇತ್ರದಲ್ಲೂ ಹಿನ್ನೆಡೆ ಅನುಭವಿಸಿದರು. ಅಲ್ಲದೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ.