BJP's victorious march begins today itself: Arun
-ವಿಜಯೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಕಾರ್ಯಕರ್ತರಿಗೆ ಸಿಹಿ ತಿನಿಸಿ ಸಂಭ್ರಮಾಚರಣೆ
--ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬಿಜೆಪಿಯ ವಿಜಯಯಾತ್ರೆ ಇಂದಿನಿಂದಲೇ ಪ್ರಾರಂಭವಾಗಿದೆ. ಇನ್ನು ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ಬುಧವಾರ ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ವಿಧಾನ ಪರಿಷತ್ 4 ಸ್ಥಾನಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು, ಮುಂಬರುವ ಜಿಲ್ಲಾ ಪಂಚಾಯತ್. ತಾಪಂ. ಪಾಲಿಕೆ ಹಾಗೂ 2028ರ ವಿಧಾನಸಭಾ ಚುನಾವಣೆ ಮುಂಬರುವ ಲೋಕಸಭಾ ಚುನಾವಣೆಗಳಲ್ಲೂ ಬಿಜೆಪಿ ಭರ್ಜರಿ ಜಯ ಸಾಧಿಸಲಿದೆ.
ಕಾಂಗ್ರೆಸ್ನ ಭ್ರಷ್ಟಾಚಾರಕ್ಕೆ ಸಂಕಷ್ಟಕ್ಕೀಡಾದ ರಾಜ್ಯದ ಜನ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಸೋಲಿಸಲಿದ್ದಾರೆ ಎಂದರು.4 ಟೆಸ್ಟ್ಗಳಲ್ಲಿ ಪಾಸಾಗಿದ್ದೇವೆ. ಮುಂಬರುವ ಪರೀಕ್ಷೆಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಇವಿಎಂ ವಿರೋಧಿಸುತ್ತಿದ್ದ, ಮತ ಪತ್ರ ಚುನಾವಣೆಗೆ ಒತ್ತಾಯಿಸಿದ ಕಾಂಗ್ರೆಸ್ಗೆ ಜನರು ಪಾಠ ಕಲಿಸಿದ್ದಾರೆ. ಪ್ರಜ್ಞಾವಂತ ಶಿಕ್ಷಕರು ಮತ್ತು ಪದವೀಧರರು ತಕ್ಕ ಉತ್ತರ ನೀಡಿದ್ದಾರೆ. ನಾಲ್ಕಕ್ಕೆ ನಾಲ್ಕೂ ಸ್ಥಾನಗಳಲ್ಲಿ ಎನ್ಡಿ ಎ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಇದೇ ಮೊದಲ ಬಾರಿಗೆ ನಾಲ್ಕು ಅಭ್ಯರ್ಥಿಗಳು ಮೊದಲ ಸುತ್ತಿನಲ್ಲೇ ಲೀಡ್ ಪಡೆದು ಜಯಗಳಿಸಿದ್ದು ವಿಶೇಷವಾಗಿದೆ ಎಂದರು.
ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬುದನ್ನು ಮೇಲ್ಮನೆಯ ಈ ಚುನಾವಣಾ ಫಲಿತಾಂಶ ತೋರಿಸಿದೆ. ಅಭಿವೃದ್ಧಿ ಶೂನ್ಯ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಮತದಾರ ಭ್ರಷ್ಟಾಚಾರಿಗಳಿಗೆ ತಕ್ಕ ಪಾಠ ಕಲಿಸಿದ್ದಾನೆ ಎಂದು ಹೇಳಿದರು.ವಿಜಯೋತ್ಸವದ ಸಂದರ್ಭದಲ್ಲಿ ಬಿಜೆಪಿ ನಗರ ಗ್ರಾಮಾಂತರ ಮತ್ತು ಜಿಲ್ಲಾಮಟ್ಟದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎನ್ ಕೆ ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಪ್ರಮುಖರಾದ ಜ್ಯೋತಿ ಪ್ರಕಾಶ್, ಬಳ್ಳಕೆರೆ ಸಂತೋಷ್, ಮಾಲತೇಶ್, ಸುರೇಖಾ ಮುರಳಿಧರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಮಧುರಾ ಶಿವಾನಂದ್, ಸಿದ್ದಲಿಂಗಪ್ಪ, ಸುರೇಶ್, ರಶ್ಮಿ ಶ್ರೀನಿವಾಸ್, ಎಚ್.ಎನ್.ಮಂಜುನಾಥ್, ಯಶೋಧಾ ವೈಷ್ಣವ, ವಿಶ್ವನಾಥ್, ಚಂದ್ರಶೇಖರ್ ಮತ್ತಿತರರು ಇದ್ದರು.------------------
ಪೋಟೋ: 28ಎಸ್ಎಂಜಿಕೆಪಿ07ಶಿವಮೊಗ್ಗ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ಬುಧವಾರ ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಪಾಲ್ಗೊಂಡು ಕಾರ್ಯಕರ್ತರಿಗೆ ಸಿಹಿ ತಿನಿಸಿದರು.