ದಾಬಸ್‍ಪೇಟೆ: ದಾವಣೆಗೆರೆ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಬೆಂಗಳೂರಿನಿಂದ-ದಾವಣಗೆರೆಗೆ ತೆರಳುವ ಮಾರ್ಗಮಧ್ಯೆ ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ ಲೋಕಾರ್ಪಣೆಗೊಂಡ ಶ್ರೀ ಆಂಜನೇಯಸ್ವಾಮಿ ಮತ್ತು ಬಸವೇಶ್ವರಸ್ವಾಮಿ ದೇವಾಲಯಗಳಿಗೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು
ದಾಬಸ್‍ಪೇಟೆ: ದಾವಣೆಗೆರೆ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಬೆಂಗಳೂರಿನಿಂದ-ದಾವಣಗೆರೆಗೆ ತೆರಳುವ ಮಾರ್ಗಮಧ್ಯೆ ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ ಲೋಕಾರ್ಪಣೆಗೊಂಡ ಶ್ರೀ ಆಂಜನೇಯಸ್ವಾಮಿ ಮತ್ತು ಬಸವೇಶ್ವರಸ್ವಾಮಿ ದೇವಾಲಯಗಳಿಗೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ತುಮಕೂರಿನ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಲಿಂ. ಡಾ.ಶ್ರೀ.ಶಿವಕುಮಾರ ಮಹಾಸ್ವಾಮೀಜಿಯ ಜನ್ಮದಿನದ ಅಂಗವಾಗಿ ನಾಳೆ ದಾಸೋಹವಿದೆ. ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠಕ್ಕೆ ಇಂದೇ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುತ್ತೇನೆ. ನಾಳೆ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದಾರೆ. ಉಪ ಚುನಾವಣೆ ಪ್ರಚಾರಕ್ಕಾಗಿ ದಾವಣಗೆರೆಗೆ ಹೋಗುತ್ತಿದ್ದೇನೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಭ್ರಷ್ಟಾಚಾರ ಹೆಚ್ಚಾಗಿರುವುದು, ಸಂಪೂರ್ಣ ಬಹುಮತವಿದ್ದರೂ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಮರಿಸ್ವಾಮಿ, ಕೆಆರ್‌ಐಡಿಎಲ್ ಮಾಜಿ ಅಧ್ಯಕ್ಷ ರುದ್ರೇಶ್, ಎನ್‌ಡಿಎ ಮಾಜಿ ಅಧ್ಯಕ್ಷ ಮಲ್ಲಯ್ಯ ಸೇರಿದಂತೆ ಕೆಂಗಲ್ ಕೆಂಪೋಹಳ್ಳಿ ಗ್ರಾಮಸ್ಥರು ಹಾಜರಿದ್ದರು.
ಫೆÇೀಟೋ 4 :ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿಯ ಶ್ರೀ ಆಂಜನೇಯ ಮತ್ತು ಬಸವೇಶ್ವರ ಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಪೂಜೆ ಸಲ್ಲಿಸಿದರು.