ದೆಹಲಿಯಲ್ಲಿ ಬಿಜೆಪಿ ಗೆಲುವು: ಕೊರಟಗೆರೆಯಲ್ಲಿ ಸಂಭ್ರಮಾಚರಣೆ

| Published : Feb 11 2025, 12:49 AM IST

ಸಾರಾಂಶ

ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವ ಎಲ್ಲರಿಗೂ ದೆಹಲಿ ಚುನಾವಣೆ ಒಂದು ಪಾಠವಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಹಿಂದೆಂದೂ ಕಾಣದಷ್ಟು ಹಗರಣ ನಡೆಸಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಕನ್ನಡಪ್ರಭ ವಾರ್ತೆ ಕೊರಟಗೆರೆ

ದೆಹಲಿಯಲ್ಲಿ ಕಳೆದ 27 ವರ್ಷಗಳ ನಂತರ ಪೂರ್ಣ ಬಹುಮತಗದೊಂದಿಗೆ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್.ಎಸ್.ಆರ್. ವೃತ್ತದಲ್ಲಿ ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಿಸಿದರು.ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡಿ 27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಜಯ ಸಾಧಿಸಿದೆ. ಒಂದು ದಶಕ ಆಡಳಿತ ನಡೆಸಿದ ಅಮ್ ಆದ್ಮಿ ಪಕ್ಷ ಹೀನಾಯ ಸೋಲನ್ನು ಅನುಭವಿಸಿದೆ. ಕೇಜ್ರಿವಾಲ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು ಸೋಲು ಅನುಭವಿಸಿದ್ದಾರೆ. ದೆಹಲಿ ಬಿಜೆಪಿ ಪಾಲಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಇತಿಹಾಸ ಸೃಷ್ಠಿಸಿದ್ಧಾರೆ ಎಂದರು.

ಕೊರಟಗೆರೆ ಕ್ಷೇತ್ರದಲ್ಲಿ ಈಗಾಗಲೇ ಹಾಲು ಒಕ್ಕೂಟ ಮತ್ತು ಪಿಎಲ್‌ಡಿ ಬ್ಯಾಂಕ್ ಚುನಾವಣೆಗಳಲಿ ಬಿಜೆಪಿಯ ಎನ್.ಡಿ.ಎ ಪಕ್ಷ ಜಯಭೇರಿ ಸಾಧಿಸಿದೆ. ಮುಂದಿನ ದಿನಗಳಲ್ಲಿ ನಡೆಯುವ ತಾ.ಪಂ. ಮತ್ತು ಜಿ.ಪಂ ಚುನಾವಣೆಗಳಲ್ಲಿ ಕ್ಷೇತ್ರದಲ್ಲಿ ಎನ್.ಡಿ.ಎ ಮಿತ್ರ ಪಕ್ಷ ಹೆಚ್ಚಿನ ಸ್ಥಾನ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳಿಸುವುದಾಗಿ ತಿಳಿಸಿದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ವಾಮಿ ಮಾತನಾಡಿ, ಕಳೆದ 10 ವರ್ಷಗಳಿಂದ ದೆಹಲಿಯಲ್ಲಿ ಅಮ್ ಅದ್ಮಿ ಪಕ್ಷ ಅಧಿಕಾರದಲ್ಲಿತ್ತು. ಜನತೆ ಬಹಳ ನಂಬಿಕೆಯಿಟ್ಟು ಆಮ್ ಆದ್ಮಿ ಪಕ್ಷಕ್ಕೆ ಅಧಿಕಾರ ನೀಡಿದ್ದರು. ದೆಹಲಿಯಲ್ಲಿ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಅಬಕಾರಿ ಹಗರಣದಲ್ಲಿ ಸಿಲುಕಿದವರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ಜನತೆ ಎಲ್ಲರಿಗೂ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವ ಎಲ್ಲರಿಗೂ ದೆಹಲಿ ಚುನಾವಣೆ ಒಂದು ಪಾಠವಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಹಿಂದೆಂದೂ ಕಾಣದಷ್ಟು ಹಗರಣ ನಡೆಸಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಈ ನಿಟ್ಟಿನಲ್ಲಿ ಜನತೆ ಎಎಪಿ ಸರ್ಕಾರದ ವಿರುದ್ಧ ಮತ ಚಲಾಯಿಸಿ ಅಭಿವೃದ್ಧಿ ಪರವಾದ ಭಾರತೀಯ ಜನತಾ ಪಕ್ಷಕ್ಕೆ ಅಧಿಕಾರ ನೀಡಿ ಆರ್ಶೀವದಿಸಿದ್ದಾರೆ ಎಂದು ತಿಳಿಸಿದರು.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅರುಣ್, ಜಿಲ್ಲಾ ರೈತ ಮಾರ್ಚ ಅಧ್ಯಕ್ಷ ನಾಗರಾಜು, ಮಾಜಿ ಪ್ರದಾನ ಕಾರ್ಯದರ್ಶಿ ಗುರುದತ್, ಎಸ್ಟಿ ಮೋರ್ಚಾ ಅಧ್ಯಕ್ಷ ಗೋಪಾಲಕೃಷ್ಣ, ಮುಖಂಡರಾದ ರಾಜೇಂದ್ರ, ದಯಾನಂದ್, ಚೇತನ್, ಶಿವಕುಮಾರ್, ಸಿದ್ದಗಂಗಪ್ಪ, ಸರೇಶ್, ಶ್ರೀಧರ್, ಪ್ರಕಾಶ್‌ರೆಡ್ಡಿ, ಲಿಂಗಣ್ಣ, ಮಹೇಶ್, ಮಂಜುನಾಥ್, ಮೋಹನ್, ರಂಗರಾಜು, ಸಿದ್ದರಾಜು, ಮುಕ್ಕಣ್ಣಪ್ಪ, ಚಂದ್ರಣ್ಣ, ಮಾರುತಿ, ಹನುಮೇಶ್, ರವಿ, ಹನುಮಂತ, ಪ್ರವೀಣ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.(ಚಿತ್ರ ಇದೆ)೧೦ ಕೊರಟಗೆರೆ ಚಿತ್ರ ೦೧;- ಕೊರಟಗೆರೆ ಪಟ್ಟಣದಲ್ಲಿ ದೆಹಲಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.