ದೇಶದಲ್ಲಿ ಬಿಜೆಪಿಯ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ: ಲಕ್ಷ್ಮೀ ಹೆಬ್ಬಾಳ್ಕರ್

| Published : Aug 16 2025, 12:02 AM IST

ದೇಶದಲ್ಲಿ ಬಿಜೆಪಿಯ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ: ಲಕ್ಷ್ಮೀ ಹೆಬ್ಬಾಳ್ಕರ್
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಬಿಜೆಪಿ‌ಯವರು ಮಾಡಿದ ಮತಗಳ್ಳತನದಿಂದಾಗಿ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಅವರು ಶುಕ್ರವಾರ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿ, ಬಿಜೆಪಿಯ ಯಾವುದೇ ಹುನ್ನಾರಗಳಿಂದ ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಲ್ಲ ಎಂದರು.ವಿಧಾನಸಭೆ ಚುನಾವಣೆಯಲ್ಲಿ 135 ಸೀಟುಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ, ನಮಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಯಿತು. ಇದಕ್ಕೆ ಕಾರಣ ಬಿಜೆಪಿಯ ಮತಗಳ್ಳತನ. ಮುಂದೆ ನಡೆಯುವ ಬಿಹಾರ‌ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವನ್ನು ಸೋಲಿಸುವ ಸಲುವಾಗಿ ಈಗಾಗಲೇ 85 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ. ಕೈಬಿಟ್ಟ ಮತದಾರರ ಪಟ್ಟಿಯನ್ನು ನೀಡದೆ, ಚುನಾವಣಾ ಆಯೋಗ ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸುತ್ತಿದೆ ಎಂದು ಸಚಿವರು ಆರೋಪಿಸಿದರು.ಸಮಾರಂಭದಲ್ಲಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರ್, ಪಕ್ಷದ ಪ್ರಮುಖರಾದ ಎಂ.ಎ.ಗಫೂರ್, ‌ಪ್ರಸಾದ್ ಕಾಂಚನ್, ರಮೇಶ್ ಕಾಂಚನ್, ಕಿಶನ್ ಶೆಟ್ಟಿ, ಹರೀಶ್ ಕಿಣಿ, ದೀಪಕ್ ಕೊಟ್ಯನ್, ಭುಜಂಗ ಶೆಟ್ಟಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.