ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆಯ ಪ್ರಯುಕ್ತ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣ ಮುಂಭಾಗದಲ್ಲಿರುವ ಡಾ. ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಉಡುಪಿಯ ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ. ರಾಘವೇಂದ್ರ ಕಿಣಿ, ಡಾ.ವಿ.ಎಸ್. ಆಚಾರ್ಯರ ಪುತ್ರರಾದ ಡಾ. ರವಿರಾಜ್ ವಿ. ಆಚಾರ್ಯ, ಡಾ. ಕಿರಣ್ ವಿ. ಆಚಾರ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ.ಶೆಟ್ಟಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಅಶೋಕ್ ನಾಯ್ಕ್, ಕಲ್ಪನಾ ಸುಧಾಮ, ಪ್ರಮುಖರಾದ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಕಿಶೋರ್ ಕರಂಬಳ್ಳಿ, ಎನ್. ರಾಮಕೃಷ್ಣ, ಮಂಜುಳಾ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.ಡಾ. ಆಚಾರ್ಯರ ಪಕ್ಷನಿಷ್ಠೆ, ದಕ್ಷತೆ ಕಾರ್ಯಕರ್ತರಿಗೆ ದಾರಿ ದೀಪ : ಎಂ. ಬಿ. ಭಾನುಪ್ರಕಾಶ್ಉಡುಪಿ: ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ. ವಿ.ಎಸ್. ಆಚಾರ್ಯ ಅವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪವಾಗಿದೆ ಎಂದು ಬಿಜೆಪಿಯ ಲೋಕಸಭಾ ಚುನಾವಣಾ ಕ್ಲಸ್ಟರ್ ಪ್ರಭಾರಿ (ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಂ.ಬಿ. ಭಾನುಪ್ರಕಾಶ್ ಹೇಳಿದರು.
ಅವರು ಬುಧವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ. ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ. ಆಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನಗೈದು ಮಾತನಾಡಿದರು.ಉಡುಪಿ ನಗರಸಭೆಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಡಾ. ಆಚಾರ್ಯರವರು ದೇಶದಲ್ಲೇ ಮೊದಲ ಬಾರಿಗೆ ತಲೆಯಲ್ಲಿ ಮಲವನ್ನು ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿರುವುದು ಐತಿಹಾಸಿಕ ದಾಖಲೆ. ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದ ಡಾ. ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು ಅನುಕರಣೀಯ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಂಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಚಂದ್ರಶೇಖರ ಪ್ರಭು, ಶಿವರಾಮ ಕಾಡಿಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.