ವಾಲ್ಮಿಕಿ ನಿಗಮದಲ್ಲಿ ಕೋಟ್ಯಂತರ ರುಪಾಯಿಗಳ ಅಕ್ರಮ ಹಾಗೂ ಹಗರಣ ಪ್ರಕರಣದ ಆರೋಪಿ ನಾಗೇಂದ್ರ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಆರೋಪಿಸಿ, ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಬುಧವಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
* ಅನುದಾನವನ್ನು ದುರ್ಬಳಕೆ
- ಜಿಲ್ಲಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಕನ್ನಡಪ್ರಭ ವಾರ್ತೆ ಯಾದಗಿರಿವಾಲ್ಮಿಕಿ ನಿಗಮದಲ್ಲಿ ಕೋಟ್ಯಂತರ ರುಪಾಯಿಗಳ ಅಕ್ರಮ ಹಾಗೂ ಹಗರಣ ಪ್ರಕರಣದ ಆರೋಪಿ ನಾಗೇಂದ್ರ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಆರೋಪಿಸಿ, ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಬುಧವಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಸಚಿವರಾಗಿದ್ದ ಬಿ. ನಾಗೇಂದ್ರ ಅವರು ವಾಲ್ಮೀಕಿ ನಿಗಮದ ₹187 ಕೋಟಿ ಅನುದಾನವನ್ನು ದುರ್ಬಳಕೆ ಮಾಡಿ, ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆಗೆ ಹಾಗೂ ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದರು. ನಿಗಮದ ಲೇಖಪಾಲಕ ಚಂದ್ರಶೇಖರ ಅವರು, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದ ಡೆತ್‌ನೋಟ್‌ನಲ್ಲಿ ಈ ಹಣಕಾಸು ಅವ್ಯವಹಾರಗಳ ಬಗ್ಗೆ ಉಲ್ಲೇಖಿಸಿದ್ದರು. ಪ್ರಕರಣ ತನಿಖೆ ವಿರೋಧ ಪಕ್ಷಗಳು ಒತ್ತಾಯಿಸಿದ್ದವು. ಈಗ ಆ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದ್ದರೂ ಅವರನ್ನು ಮತ್ತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಸಚಿವ ಸಂಪುಟದಲ್ಲಿ ಸಚಿವರನ್ನಾಗಿ ಮಾಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಹಿಂದೆ ರಾಜ್ಯದಲ್ಲಿ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ
ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ವಾಸ್ತವಿಕ ಸತ್ಯವನ್ನು ಒಪ್ಪಿಕೊಂಡು, ಕೇವಲ ₹98 ಕೋಟಿ ಮಾತ್ರ ಅವ್ಯವಹಾರವಾಗಿದೆ ಎಂದು ತಿಳಿಸಿ, ನಾಗೇಂದ್ರ ಅವರಿಂದ ರಾಜಿನಾಮೆ ಪಡೆದಿದ್ದರು, ಆ ಪ್ರಕರಣ ಇನ್ನೂ ತನಿಖಾ ಹಂತದಲ್ಲಿ ಇರುವಾಗಲೇ ಕಾಂಗ್ರೆಸ್ ಹೈಕಮಾಂಡ್ ಮತ್ತೆ ಅವರನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಸಚಿವ ಸಂಪುಟದಲ್ಲಿ ಸಚಿವರನ್ನಾಗಿ ಮಾಡಿದೆ, ಇದರಿಂದ ರಾಜ್ಯದ ಏನು ಸಂದೇಶ ಕಳಿಸಿದ್ದೀರಿ ಎಂದು ಸರ್ಕಾರದ ವಿರುದ್ಧ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.ಸಚಿವ ನಾಗೇಂದ್ರ ಮೇಲೆ ಹಲವಾರು ಕೇಸ್‌ಗಳಿವೆ, ಈ ಹಣ ದುರುಪಯೋಗ ಪ್ರಕರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ಅಂದಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಪಾತ್ರ ಇರುವುದರಿಂದಲೇ ಭಯದಿಂದ ಎಲ್ಲಿ ತನಿಖಾಧಿಕಾರಿಗಳ ಮುಂದೆ ನಮ್ಮ ಹೆಸರು ಬಾಯಿ ಬಿಡುತ್ತಾನೆ ಎಂದು ಹೆದರಿ, ಅವರಿಗೆ ಸಚಿವ ಸ್ಥಾನ ನೀಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದೊಡ್ಡ ಪ್ರಮಾಣದಲ್ಲಿ ಲೂಟಿ ಮಾಡಲಾಗಿದೆ, ಅಂತಹ ಸಚಿವನಿಂದ ರಾಜ್ಯದ ಜನ ಏನು ನಿರೀಕ್ಷೆ ಮಾಡಲು ಸಾಧ್ಯ, ಸದ್ಯ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಗ್ಗಟ್ಟಾಗಿ ಅವರ ರಾಜಿನಾಮೆಗೆ ನಿರಂತರ ಒತ್ತಡ ಹಾಕುತ್ತಿದ್ದಾರೆ, ಸರ್ಕಾರ ಅವರಿಂದ ರಾಜಿನಾಮೆ ಪಡೆಯದೇ ಹಲವಾರು ಸಚಿವರು ನಾಗೇಂದ್ರ ಪರ ಬೆನ್ನಿಗೆ ನಿಲ್ಲುವ ಮೂಲಕ ಮಾತನಾಡುತ್ತಿರುವುದು, ಅತ್ಯಂತ ದುಖಃಕರ ಸಂಗತಿಯಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ ಈಗಾಗಲೇ ಬರ ಉದ್ಭವಿಸಿದೆ, ಅಭಿವೃದ್ಧಿ ಕಾರ್ಯಗಳು ಜರುಗುತ್ತಿಲ್ಲ, ಸಚಿವ ಸಂಪುಟದಲ್ಲಿ ಇನ್ನೂ ಹಲವಾರು ಸಚಿವರ ಮೇಲೆ ಗುರುತರ ಆರೋಪ ಗಳಿವೆ, ಅವರ ವಿರುದ್ಧವೂ ಕೂಡ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಬಸವರಾಜಪ್ಪ ವಿಭೂತಿಹಳ್ಳಿ, ಮುಖಂಡರಾದ ರಾಚನಗೌಡ ಮುದ್ನಾಳ, ಸಿದ್ದಣಗೌಡ ಕಾಡಂನೋರ, ನಾಗರತ್ನ ಕುಪ್ಪಿ, ಮಹೇಶರಡ್ಡಿ ಮುದ್ನಾಳ, ಶ್ರೀಧರ ಸಾಹುಕಾರ, ಮಲ್ಲಪ್ಪ ಮೇಳಗಿ, ಶಿವಪುತ್ರ ಪಾಟೀಲ್, ಬಸವರಾಜ ಸೊನ್ನದ್, ಶಂಕ್ರು ಸಾಹುಕಾರ ವಡಗೇರಾ, ಪರ್ವತಪ್ಪ ಠಾಣಾಗುಂದಿ, ನಿಂಗಪ್ಪ ಹತ್ತಿಮನಿ, ಸುರೇಶ ರಾಠೋಡ, ಮಲ್ಲಿಕಾರ್ಜುನ ಜಲ್ಲಪ್ಪನೋರ ರಾಮಸಮುದ್ರ, ಚಂದಪ್ಪ ನಾಯಕ, ರಮೇಶ ದೊಡ್ಡಮನಿ, ನರಸಿಂಹಲು ನೀರಟ್ಟಿ, ಸುನೀತಾ ಚವ್ಹಾಣ, ಪ್ರಭಾವತಿ ಕಲಾಲ್, ರಾಜಶೇಖರ ಕಾಡಂನೋರ, ಚಂದ್ರಶೇಖರ ಕಡೇಚೂರ, ಸೇರಿದಂತೆ ಬಿಜೆಪಿ ಕಾರ್ಯರ್ಕರು ಉಪಸ್ಥಿತರಿದ್ದರು.
-19ವೈಡಿಆರ್9 : ವಾಲ್ಮಿಕಿ ನಿಗಮದಲ್ಲಿ ಕೋಟ್ಯಂತರ ರುಪಾಯಿಗಳ ಅಕ್ರಮ ಹಾಗೂ ಹಗರಣ ಪ್ರಕರಣದ ಆರೋಪಿ, ಬಿ. ನಾಗೇಂದ್ರ ಅವರಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಆರೋಪಿಸಿ, ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಬುಧವಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
---000---