ಸಾರಾಂಶ
ಬಿಜೆಪಿಯಲ್ಲಿ ಆಂತರಿಕ ಚುನಾವಣಾ ವ್ಯವಸ್ಥೆ ಇದ್ದು, ಎಲ್ಲವನ್ನೂ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪರೋಕ್ಷ ಸವಾಲು ಹಾಕಿದ್ದಾರೆ.
ಬೆಂಗಳೂರು : ಬಿಜೆಪಿಯಲ್ಲಿ ಆಂತರಿಕ ಚುನಾವಣಾ ವ್ಯವಸ್ಥೆ ಇದ್ದು, ಎಲ್ಲವನ್ನೂ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪರೋಕ್ಷ ಸವಾಲು ಹಾಕಿದ್ದಾರೆ.
ಸೋಮವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ರಾಜ್ಯಾಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದು ಖಚಿತ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದರು.
ಬಿಜೆಪಿಯಲ್ಲಿ ಆಂತರಿಕ ಚುನಾವಣೆ ನಡೆಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡಿಕೊಂಡು ಬಂದಿದ್ದೇವೆ. ಮುಂದಿನ ದಿನದಲ್ಲಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಕುರಿತು ಕೇಂದ್ರದ ವರಿಷ್ಠರು ಗಮನಹರಿಸಲಿದ್ದಾರೆ. ಕೆಲವರ ಹೇಳಿಕೆಯನ್ನೂ ಪಕ್ಷದ ವರಿಷ್ಠರು ಗಮನಿಸುತ್ತಾರೆ. ಎಲ್ಲದಕ್ಕೂ ನಾನು ಸಿದ್ಧನಿದ್ದು, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.