ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅ.5ರಂದು ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಹಾವೇರಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.

ಬ್ಯಾಡಗಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅ.5ರಂದು ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಹಾವೇರಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಾರ‍್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ನೆಹರು ನಗರದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು, ಬಳಿಕ ದಾನಮ್ಮದೇವಿ ದೇವಸ್ಥಾನದಿಂದ ಸಿದ್ದೇಶ್ವರ ಕಲ್ಯಾಣಮಂಟಪದವರೆಗೆ ಬೃಹತ್ ಪಾದಯಾತ್ರೆ ನಡೆಯಲಿದೆ.

ಸಾರ್ವಜನಿಕ ಸಭೆ: ಎಪಿಎಂಸಿ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕಸಭೆ ಆಯೋಜಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ರಾಜ್ಯ ಹಾಗೂ ಪಕ್ಷದ ಜಿಲ್ಲಾ ಮುಖಂಡರು ಮತ್ತು ಪ್ರಮುಖರು ಭಾಗವಹಿಸಲಿದ್ದಾರೆ.

ಒಂದು ತಿಂಗಳು ಸೇವಾ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆ.17ರಿಂದ ಅ.17ರ ವರೆಗೆ 1 ತಿಂಗಳ ಕಾಲ ದೇಶಾದ್ಯಂತ ಸೇವಾಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ, ಈ ಅವಧಿಯಲ್ಲಿ ಸಾರ್ವಜನಿಕ ಸೇವೆ, ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಜನಪರ ಕಾರ‍್ಯಕ್ರಮ ಮೂಲಕ ಸಮಾಜಕ್ಕೆ ಕೊಡುಗೆ ನೀಡುವ ಉದ್ದೇಶ ಹೊಂದಲಾಗಿದೆ.

ಸದರಿ ಕಾರ್ಯಕ್ರಮ ಯಶಸ್ವಿಗೊಳಿಸಲು ಬಿಜೆಪಿ ಎಲ್ಲ ಮುಖಂಡರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಸದಸ್ಯರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಇದೇ ವೇಳೆ ಮನವಿ ಮಾಡಿದರು. ತಾಲೂಕಾಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ, ಶಂಕರಗೌಡ್ರ ಪಾಟೀಲ, ಸರೋಜಾ ಉಳ್ಳಾಗಡ್ಡಿ, ವಿಜಯ ಮಾಳಗಿ, ಕಲಾವತಿ ಬಡಿಗೇರ, ವಿಜಯಭರತ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.