ನಾಮನಿರ್ದೇಶನದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ: ಜೋಶಿ

| Published : Aug 04 2025, 01:00 AM IST

ನಾಮನಿರ್ದೇಶನದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ: ಜೋಶಿ
Share this Article
  • FB
  • TW
  • Linkdin
  • Email

ಸಾರಾಂಶ

ಹಾಲಿ ಅಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಈ ಬಾರಿ ನಾನೇ ರಾಜ್ಯಾಧ್ಯಕ್ಷನಾಗುವೆ ಎಂದು ಹೇಳಿಕೊಂಡಿಲ್ಲ. ಹೀಗಾಗಿ ರಾಷ್ಟ್ರೀಯ ಅಧ್ಯಕ್ಷರು ಅರ್ಹರನ್ನು ಆಯ್ಕೆ ಮಾಡಲಿದ್ದಾರೆ.

ಧಾರವಾಡ: ಕರ್ನಾಟಕ ಸೇರಿದಂತೆ ದೇಶದ ಎಲ್ಲ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರನ್ನು ರಾಷ್ಟ್ರೀಯ ನಾಯಕರು ನಾಮನಿರ್ದೇಶನದ ಮೂಲಕ ಆಯ್ಕೆ ಮಾಡುತ್ತಾರೆ. ಈ ವಿಷಯದಲ್ಲೇನೂ ಗೊಂದಲ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಅಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಈ ಬಾರಿ ನಾನೇ ರಾಜ್ಯಾಧ್ಯಕ್ಷನಾಗುವೆ ಎಂದು ಹೇಳಿಕೊಂಡಿಲ್ಲ. ಹೀಗಾಗಿ ರಾಷ್ಟ್ರೀಯ ಅಧ್ಯಕ್ಷರು ಅರ್ಹರನ್ನು ಆಯ್ಕೆ ಮಾಡಲಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಸರ್ಕಾರಿ ಶಾಲೆಗಳ ಕೊಠಡಿಗಳು ದುರಸ್ತಿಯಲ್ಲಿರುವ ಕಾರಣ ಸಿಎಸ್‌ಆರ್‌ ಅನುದಾನದ ಅಡಿ ಹೊಸ ಕೊಠಡಿ ಹಾಗೂ ಬಣ್ಣ ಹಚ್ಚುವ ಕಾರ್ಯವನ್ನು ನಾವು ಮಾಡಿದ್ದೇವೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇಲ್ಲಿಯ ವರೆಗೆ 1100 ಸರ್ಕಾರಿ ಶಾಲೆಗಳ ಕೊಠಡಿಗಳು ಹಾಗೂ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಬಣ್ಣ, 30 ಸಾವಿರ ಡೆಸ್ಕ್‌ ಹಾಗೂ 150 ಸ್ಮಾರ್ಟ್‌ ಬೋರ್ಡ್‌, 200 ಹೈಟೆಕ್‌ ಶೌಚಾಲಯಗಳನ್ನು ನೀಡಲಾಗಿದೆ. ಖಾಸಗಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಸಹ ಸರ್ಕಾರಿ ಶಾಲೆಗೆ ನೀಡಬೇಕೆಂಬ ಉದ್ದೇಶದಿಂದ ಸಿಎಸ್ಆರ್‌ ಅನುದಾನದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಧಾರವಾಡದ ಕರ್ನಾಟಕ ವಿವಿ, ಹಳಿಯಾಳ ರಸ್ತೆಯಲ್ಲಿ ನಡೆಯುತ್ತಿರುವ ರೈಲ್ವೆ ಕೆಳಸೇತುವೆ ಕಾಮಗಾರಿ ವಿಳಂಬ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದ ಭೂ ಸ್ವಾಧೀನ ಸಮಸ್ಯೆ ಹಾಗೂ ಗುತ್ತಿಗೆದಾರರ ವಿಳಂಬವೋ ಪರಿಶೀಲಿಸಿ ಉತ್ತರಿಸುತ್ತೇನೆ ಎಂದರು.