ಸಾರಾಂಶ
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಯೋಜನೆಗೆ ನಯಾಪೈಸೆ ಅನುದಾನ ಬಿಡುಗಡೆಯಾಗದೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಜನಸಾಮಾನ್ಯರ ಅಸಮಾಧಾನಕ್ಕೆ ಗುರಿಯಾಗುತ್ತಿದ್ದಾರೆ. ಬಿಜೆಪಿ ಸದಸ್ಯರ ಮತದ ಜತೆಗೆ ಪ್ರತಿಪಕ್ಷದ ಸದಸ್ಯರ ಮತಗಳು ಬಿಜೆಪಿ ಅಭ್ಯರ್ಥಿಗೆ ದೊರೆಯುವ ವಿಶ್ವಾಸವಿದೆ ಎಂದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಅಕ್ಟೋಬರ್ 15 ರಂದು ಬಂಟ್ವಾಳದ ಬಂಟರ ಭವನದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ರವರು ಆಗಮಿಸಲಿದ್ದು ವಿಧಾನ ಪರಿಷತ್ ಉಪ ಚುನಾವಣೆ ಪ್ರಚಾರದ ಕಹಳೆ ಮೊಳಗಿಸಲಿದ್ದಾರೆ ಎಂದು ಮಂಗಳೂರು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ಹೇಳಿದರು.ಅವರು ವಿಧಾನ ಪರಿಷತ್ ಉಪ ಚುನಾವಣೆ ಪೂರ್ವಭಾವಿಯಾಗಿ ಮುಡಿಪು ಕಂಬ್ಲಪದವು ಶ್ರೀ ದುರ್ಗಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಮಂಗಳೂರು ಮಂಡಲದ ಬಿಜೆಪಿ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಯೋಜನೆಗೆ ನಯಾಪೈಸೆ ಅನುದಾನ ಬಿಡುಗಡೆಯಾಗದೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಜನಸಾಮಾನ್ಯರ ಅಸಮಾಧಾನಕ್ಕೆ ಗುರಿಯಾಗುತ್ತಿದ್ದಾರೆ. ಬಿಜೆಪಿ ಸದಸ್ಯರ ಮತದ ಜತೆಗೆ ಪ್ರತಿಪಕ್ಷದ ಸದಸ್ಯರ ಮತಗಳು ಬಿಜೆಪಿ ಅಭ್ಯರ್ಥಿಗೆ ದೊರೆಯುವ ವಿಶ್ವಾಸವಿದೆ ಎಂದರು.ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಯತೀಶ್ ಆರ್ವಾರ್, ಮಂಡಲ ಪ್ರಭಾರಿ ದಿನೇಶ್ ಅಮ್ಟೂರ್, ವಕ್ತಾರರಾದ ಮೋಹನ್ ರಾಜ್ ಕೆ.ಆರ್., ದೇವದಾಸ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ತೊಕ್ಕೊಟು, ಸುಜಿತ್ ಮಾಡೂರುಇದ್ದರು.